
ಕೋಣಂದೂರು: ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಗೆ ಶಿವಮೊಗ್ಗದಲ್ಲಿ ಈಚೆಗೆ ನಡೆದ 3ನೇ ಅಂತರರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಷಿಪ್‌ನಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ.
ಬಾಲಕರ ಮತ್ತು ಬಾಲಕಿಯರ ವಿವಿಧ ವಯೋಮಾನದ ಕತಾ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 18 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 38 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.
ಕುಮಿಟೆ ವಿಭಾಗದಲ್ಲಿ 9 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 10 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ 18 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಶಾಲೆಗೆ ಸಮಗ್ರ ಪ್ರಶಸ್ತಿ ತಂದುಕೊಟ್ಟಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲ ಕೆ.ಎಸ್.ವಾಸುದೇವ, ಕರಾಟೆ ತರಬೇತುದಾರ ಮಂಜು, ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.