ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚಿಸಲು ಶಾಸಕ ಬಸನಗೌಡ ಪಾಟೀಲ ಯತ್ನಾಳ ಯಾರು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಶ್ನಿಸಿದರು.
ಬಿಜೆಪಿ ವಿಶೇಷ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ರಾಜ್ಯ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಆದರೂ, ಮಾಧ್ಯಮಗಳಲ್ಲಿ ಇದೇ ವಿಷಯ ಚರ್ಚೆಯಾಗುತ್ತಿದೆ. ಇಂತಹ ವಿಷಯಗಳ ಕುರಿತು ಬೀದಿಗಳಲ್ಲಿ ಮಾತನಾಡಲು ಯತ್ನಾಳ್ ಯಾರು? ಎಲ್ಲರೂ ಅವರ ಪರಿಮಿತಿಯಲ್ಲೇ ಕೆಲಸ ಮಾಡಬೇಕು. ಸಮಸ್ಯೆ, ಅಸಮಾಧಾನವಿದ್ದರೆ ಪಕ್ಷದ ವೇದಿಕೆಗಳಲ್ಲಿ ಚರ್ಚಿಸಬೇಕು ಎಂದು ತಾಕೀತು ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.