ಹೊಸನಗರ: ತಾಲ್ಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಹೊಸನಗರ ಸಮೀಪದ ಹೋಲಿ ರಿಡೀಮರ್ ಶಾಲೆ ಬಳಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿ ಮೇಲೆ ಉರುಳಿ ಬಿದ್ದಿದೆ.
ಶುಕ್ರವಾರ ಮಧ್ಯಾಹ್ನ 1.30ರ ವೇಳೆಗೆ ಹೆದ್ದಾರಿಗೆ ಮರ ಬಿದ್ದಿದ್ದು, ಈ ಮಾರ್ಗದ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ಸಹಕಾರದಿಂದ ಮರ ತೆರವು ಮಾಡಿದರು.
ಕಾರ್ಯಾಚರಣೆ ವೇಳೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಹೆಚ್ಚಿನ ವಾಹನ ದಟ್ಟಣೆ ಆಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.