ಶಿವಮೊಗ್ಗದಲ್ಲಿ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದು
ಚಿತ್ರ: ಶಿವಮೊಗ್ಗ ನಾಗರಾಜ್
ಶಿವಮೊಗ್ಗ/ದಾವಣಗೆರೆ: ಧಾರಾಕಾರ ಮಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಜನಜೀವನ ಏರುಪೇರಾಗಿದೆ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ ಸರಾಸರಿ 4.16 ಸೆಂ.ಮೀ ಮಳೆ ದಾಖಲಾಗಿದೆ.
ತುಂಗ–ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ ಜಲಾಶಯದಿಂದ 76,000 ಕ್ಯುಸೆಕ್ ನೀರು ಹೊರಬಿಟ್ಟಿದ್ದು, ಕೋರ್ಪಾಲಯ್ಯನ ಛತ್ರದ ಮಂಟಪ ಮುಳುಗಡೆ ಆಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಸಂಪರ್ಕಿಸುವ ಪತ್ಯಾಪುರ ಸೇತುವೆ ಮುಳುಗಿದೆ.
ತುಂಗಾ ಜಲಾಶಯದಿಂದ 77,000 ಕ್ಯೂಸೆಕ್, ಭದ್ರಾ ಜಲಾಶಯದಿಂದ 40,000 ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಹೊನ್ನಾಳಿಯಲ್ಲಿ ನದಿತೀರದಲ್ಲಿದ್ದ 8 ಕುಟುಂಬವನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ.
ಪತ್ಯಾಪುರ ಸೇತುವೆ ಮುಳುಗಿದ್ದು, ಉಕ್ಕಡಗಾತ್ರಿ ಕರಿಬಸವೇಶ್ವರಸ್ವಾಮಿ ಭಕ್ತರು ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿ, ಮಲ್ಲನಾಯಕನಹಳ್ಳಿ ಮಾರ್ಗವಾಗಿ ಉಕ್ಕಡಗಾತ್ರಿಗೆ ತಲುಪಬೇಕಿದೆ.
ಚಿತ್ರದುರ್ಗ ವರದಿ: ಚಿತ್ರದುರ್ಗ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಿರಿಯೂರು, ಚಳ್ಳಕೆರೆ ತಾಲ್ಲೂಕಿನ ಹಲವೆಡೆ ಈರುಳ್ಳಿ ಬೆಳೆ ಕೊಚ್ಚಿಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.