ಭದ್ರಾವತಿ: ನಗರದ ನ್ಯೂಟೌನ್, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಕರುಮಾರಿಯಮ್ಮ ದೇವಸ್ಥಾನದ 45ನೇ ವರ್ಷದ ಕರಗ ಉತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಎಳನೀರು ಮತ್ತು ಪಂಚಾಮೃತ ಅಭಿಷೇಕ, ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ಬುಳ್ಳಾಪುರ ಚಾನಲ್ ಬಳಿ ಅಮ್ಮನವರಿಗೆ ಶಕ್ತಿ ಕರಗ ಸ್ಥಾಪನೆ ಮಾಡಿ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ತರಲಾಯಿತು. ನಂತರ ಮಹಾಮಂಗಳಾರತಿ ನಡೆಯಿತು.
ಭಕ್ತರಿಂದ ಅಂಬಲಿ ಸಮರ್ಪಣೆಯೊಂದಿಗೆ ಅನ್ನದಾನ ನೆರವೇರಿತು. ಯುವ ಮುಖಂಡ ಬಿ.ಎಸ್ ಗಣೇಶ್, ನಗರಸಭೆ ಸದಸ್ಯ ಕಾಂತರಾಜ್, ಗುತ್ತಿಗೆದಾರ ಎಂ.ಜಿ ರಾಮಚಂದ್ರ ಸೇರಿದಂತೆ ಇನ್ನಿತರರು ಭಕ್ತರಿಗೆ ಅಂಬಲಿ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಸಂಜೆ ದೇವಿಗೆ ಅರಿಸಿನ ಅಭಿಷೇಕ ಮತ್ತು ಮಹಾ ಮಂಗಳಾರತಿಯೊಂದಿಗೆ ಕರಗವನ್ನು ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.
ವಿಜಯ್ ಕುಮಾರ್-ಮಮತಾಶ್ರೀ ದಂಪತಿ ಕರಗ ಅಲಂಕಾರದ ಸೇವಾಕರ್ತರಾಗಿ ಶಕ್ತಿ ಕರಗ ಸ್ಥಾಪನೆ ಮಾಡಿದ್ದರು. ದೇವಸ್ಥಾನದ ಪ್ರಧಾನ ಅರ್ಚಕ ಕಾಶಿಪತಿ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು.
ಜನ್ನಾಪುರ, ನ್ಯೂಟೌನ್, ವಿದ್ಯಾಮಂದಿರ, ಗಣೇಶ್ ಕಾಲೋನಿ, ಹುಡ್ಕೋಕಾಲೋನಿ, ಆಂಜನೇಯ ಅಗ್ರಹಾರ, ಸುರಗಿತೋಪು, ಬಾಲಭಾರತಿ, ಜೆ.ಪಿ.ಎಸ್ ಕಾಲೊನಿ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.
ದೇವಸ್ಥಾನ ಸಮಿತಿ ಪ್ರಮುಖರಾದ ಅಧ್ಯಕ್ಷ ಬಿ. ಕುಪ್ಪಸ್ವಾಮಿ, ಉಪಾಧ್ಯಕ್ಷ ಸುಬ್ರಮಣಿ, ಕಾರ್ಯದರ್ಶಿ ಕಾಳಿಯಪ್ಪ, ಖಜಾಂಚಿ ಡಿ. ಶಬರಿವಾಸನ್, ನಿರ್ದೇಶಕರಾದ ದೊರೆಸ್ವಾಮಿ, ಧರ್ಮಪ್ಪ, ಮುರುಗನ್, ಕುಪ್ಪರಾಜ್, ಪಳನಿಸ್ವಾಮಿ, ಕೆ. ರವಿ, ಶ್ರೀನಿವಾಸ್, ಜೆ. ಬಾಲು, ವಿಕ್ರಂ, ರಮೇಶ್, ಧನಶೇಖರ್ ಮತ್ತು ಎ. ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.