ADVERTISEMENT

ಕಾಶ್ಮೀರ ಭಾರತ ಮಾತೆಯ ಸಿಂಧೂರ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 7 ಮೇ 2025, 14:34 IST
Last Updated 7 ಮೇ 2025, 14:34 IST
<div class="paragraphs"><p>ಆರಗ ಜ್ಞಾನೇಂದ್ರ</p></div>

ಆರಗ ಜ್ಞಾನೇಂದ್ರ

   

ತೀರ್ಥಹಳ್ಳಿ: ‘ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಒಂಬತ್ತು ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ಶ್ಲಾಘನೀಯ. ಸೇನೆ ಭಾರತ ಮಾತೆಯ ನಿಜವಾದ ಸಿಂಧೂರ ಕಾಶ್ಮೀರವನ್ನು ಭಯೋತ್ಪಾದಕರ ದಾಳಿಯಿಂದ ರಕ್ಷಿಸಿದೆ’ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

‘ಪಹಲ್ಗಾಮ್‌ ದಾಳಿ ನಡೆದ ದಿನದಿಂದ ಒಂದಿಲ್ಲೊಂದು ಕಠಿಣ ನಿಲುವು ಕೈಗೊಂಡ ನರೇಂದ್ರ ಮೋದಿ ಮತ್ತು ಭಾರತೀಯ ಸೈನಿಕರು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ದೇಶಕ್ಕೆ ನಿಜವಾದ ನೇತೃತ್ವ, ವ್ಯವಸ್ಥಿತ ಸೈನ್ಯ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನು ತೋರಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

‘ಭಾರತದ ಜೊತೆಗೆ ಕ್ಯಾತೆ ತೆಗೆಯುವ ಎಲ್ಲ ನೆರೆಯ ರಾಷ್ಟ್ರಗಳಿಗೆ ಈ ದಾಳಿ ಎಚ್ಚರಿಕೆಯ ಗಂಟೆಯಾಗಲಿದೆ. ನಾವು ದೇಶಕ್ಕೆ ಆಗುವ ಚಿಕ್ಕ ಅಪಮಾನವನ್ನು ಸಹಿಸುವುದಿಲ್ಲ. ಕಾರ್ಯಾಚರಣೆ ಪಾಕಿಸ್ತಾನಕ್ಕೆ ಪಾಠವಾಗಲಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.