ADVERTISEMENT

ಶಿವಮೊಗ್ಗ: ನಾಳೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರಧಾನ

ಪ್ರಶಸ್ತಿಗೆ ಗೊ.ರು. ಚನ್ನಬಸಪ್ಪ ಭಾಜನ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 6:29 IST
Last Updated 4 ಫೆಬ್ರುವರಿ 2023, 6:29 IST

ಶಿವಮೊಗ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ಜಿಲ್ಲಾ ಘಟಕದಿಂದ 2020–21ನೇ ಸಾಲಿನ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರುವರಿ 5ರಂದು ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಖಿಲ ಭಾರತ ಶರಣ
ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರ ಗೊ.ರು. ಚನ್ನಬಸಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಹಾಸಭಾದ ಅಧ್ಯಕ್ಷ ರುದ್ರಮುನಿ ಎನ್. ಸಜ್ಜನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ 260 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ADVERTISEMENT

ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ರುದ್ರಮುನಿ ಎನ್. ಸಜ್ಜನ್ ವಹಿಸಲಿದ್ದು, ವಿಮರ್ಶಕಿ ಡಾ.ಎಂ.ಎಸ್. ಆಶಾದೇವಿ ಅಭಿನಂದನಾ ನುಡಿ ನುಡಿಯಲಿದ್ದಾರೆ. ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಹಾಸಭಾ ಉಪಾಧ್ಯಕ್ಷ ಎಚ್.ಎಂ. ಚಂದ್ರಶೇಖರಪ್ಪ, ಶಾಸಕರಾದ ಬಿ.ಕೆ.ಸಂಗಮೇಶ್, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಕುವೆಂಪು ವಿ.ವಿ. ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ, ಕೃಷಿ ಮತ್ತು ತೋಟಗಾರಿಕೆ ವಿ.ವಿ. ಕುಲಪತಿ ಡಾ.ಆರ್.ಸಿ.ಜಗದೀಶ್, ಬಿ.ಎಸ್. ಅರುಣಾದೇವಿ, ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದರು.

ಪ್ರಮುಖರಾದ ಎಂ.ಪಿ.ಆನಂದಮೂರ್ತಿ, ಸಿ.ಮಹೇಶ್‌ಮೂರ್ತಿ, ಪಿ.ಎಂ.ರುದ್ರಮುನಿ, ಲಿಂಗರಾಜ್, ಉಮಾಶಂಕರ್, ರೇಣುಕಾ ನಾಗರಾಜ್, ಚಂದ್ರು, ಸುಹಾಸ್, ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.