ಸಾವು (ಪ್ರಾತಿನಿಧಿಕ ಚಿತ್ರ)
ಶಿವಮೊಗ್ಗ: ಮಂಗನ ಕಾಯಿಲೆ ಜ್ವರಕ್ಕೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ ಡಿ) ತುತ್ತಾಗಿದ್ದ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದ ಎಂಟು ವರ್ಷದ ಬಾಲಕ ಡಿ.ಆರ್. ರಚಿತ್ ಗುರುವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
15 ದಿನಗಳ ಹಿಂದೆ ರಚಿತ್ ಹಾಗೂ ಆತನ ಅಕ್ಕ ಇಬ್ಬರಿಗೂ ಕೆಎಫ್ ಡಿ ದೃಢಪಟ್ಟಿತ್ತು. ರಚಿತ್ ಗೆ ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಯಲ್ಲಿ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಣಿಪಾಲ ಆಸ್ಪತ್ರೆಯಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆಸಿದ್ದ ಬಾಲಕ ಗುರುವಾರ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.
ರಚಿತ್ ತೀರ್ಥಹಳ್ಳಿಯ ವಾಗ್ದೇವಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದನು. ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ ದಂಪತಿಯ ಪುತ್ರ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.