ADVERTISEMENT

ತಾಲ್ಲೂಕು ಆಸ್ಪತ್ರೆಗಳಲ್ಲಿ ಕೆಎಫ್‍ಡಿ ವಾರ್ಡ್

13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 14:25 IST
Last Updated 6 ಅಕ್ಟೋಬರ್ 2020, 14:25 IST
ಕೆ.ಬಿ.ಶಿವಕುಮಾರ್
ಕೆ.ಬಿ.ಶಿವಕುಮಾರ್   

ಶಿವಮೊಗ್ಗ:ಮಂಗನ ಕಾಯಿಲೆ ಕಾಣಿಸಿಕೊಳ್ಳುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌಲಭ್ಯ, ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೆಎಫ್‍ಡಿ ವಾರ್ಡ್ ಸಜ್ಜುಗೊಳಿಸಬೇಕು.ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಮಂಗಳವಾರ ಮಂಗನ ಕಾಯಿಲೆ ನಿಯಂತ್ರಣಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದಲ್ಲೂಅಂತರ್ ಇಲಾಖಾ ಸಮನ್ವಯ ಸಮಿತಿ ರಚಿಸಿ ಸಭೆ ನಡೆಸಬೇಕು.ನಿಗದಿತ ಪಂಚಾಯತಿವ್ಯಾಪ್ತಿಯಗ್ರಾಮಗಳಲ್ಲಿ ನವೆಂಬರ್‌ನಿಂದಮೇ ಅವಧಿಯಲ್ಲಿ ಅರಣ್ಯ ಪ್ರವೇಶ ನಿಷೇಧಿಸಲಾಗಿತ್ತು.ಮಂಗನ ಕಾಯಿಲೆಗೆ ಮೂರು ಲಸಿಕೆ ಪಡೆದಬಗ್ಗೆದೃಢೀಕರಣ ಇದ್ದವರಿಗೆಅರಣ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಅರಣ್ಯ ಪ್ರದೇಶದಲ್ಲಿ ಮಂಗ ಸತ್ತಿರುವುದು ಕಂಡು ಬಂದ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ, ಪಿಡಿಒಗೆ ಮಾಹಿತಿ ನೀಡಬೇಕು ಎಂದರು.

ADVERTISEMENT

ಲಸಿಕೆ ಪಡೆಯಬೇಕು: ಮಂಗನ ಕಾಯಿಲೆ ಹರಡುವ ಸಾಧ್ಯತೆ ಇರುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಎಲ್ಲರಿಗೂ ಲಸಿಕೆ ಹಾಕಬೇಕು. ಪ್ರತಿಯೊಬ್ಬರೂಮೂರು ಡೋಸ್ ಲಸಿಕೆತೆಗೆದುಕೊಳ್ಳಬೇಕು. ಕಳೆದ ವರ್ಷ ಮೂರು ಬಾರಿ ಲಸಿಕೆ ತೆಗೆದುಕೊಂಡ ಯಾವುದೇ ಪ್ರಕರಣಗಳಲ್ಲಿ ಸಾವು ಸಂಭವಿಸಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕುವ ಕಾರ್ಯ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಪ್ರಸ್ತುತ 32,500 ಲಸಿಕೆ ಹಾಗೂ 35 ಸಾವಿರ ಡಿಎಂಪಿ ತೈಲ ಲಭ್ಯವಿದೆ.ಅಗತ್ಯವಿರುವಷ್ಟು ಲಸಿಕೆ ಹಾಗೂ ತೈಲ ತರಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.

ಹಿಂದಿನ ವರ್ಷ 185 ಜನರಿಗೆಕೆಎಫ್‌ಡಿ

ಹಿಂದಿನವರ್ಷ 5,128 ಪ್ರಕರಣಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 185 ಪ್ರಕರಣಗಳಲ್ಲಿ ಕೆಎಫ್‍ಡಿ ದೃಢಪಟ್ಟಿತ್ತು.ಇದರಲ್ಲಿ ತೀರ್ಥಹಳ್ಳಿ ತಾಲ್ಲೂಕು 147, ಸಾಗರ 37 ಮತ್ತು ಶಿವಮೊಗ್ಗ ತಾಲ್ಲೂಕಿನಲ್ಲಿ ಒಂದು ಪ್ರಕರಣ ದೃಢಪಟ್ಟಿತ್ತು. ಶೇ 79 ಪ್ರಕರಣಗಳು ತೀರ್ಥಹಳ್ಳಿ ಹಾಗೂ ಶೇ 20 ಪ್ರಕರಣಗಳು ಸಾಗರ ತಾಲ್ಲೂಕಿನಲ್ಲಿ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮಾಹಿತಿ ನೀಡಿದರು.

ಜಾನುವಾರುಗಳಿಗೆ ಲಸಿಕೆ: ಮಂಗನ ಕಾಯಿಲೆ ಹರಡುವ ವ್ಯಾಪ್ತಿಯ ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ ಹಾಕಬೇಕು. ಈಗಾಗಲೇ ಒಂದು ಹಂತ ಲಸಿಕೆ ಹಾಕಲಾಗಿದೆ.ನವೆಂಬರ್ ತಿಂಗಳಿನಲ್ಲಿ ಎರಡನೇ ಹಂತದ ಲಸಿಕೆ ಹಾಕಬೇಕು. ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡಬಾರದು. ಪ್ರತಿದಿನ ಮೈ ತೊಳೆಯಬೇಕು ಎಂದುಸಲಹೆ ನೀಡಿದರು.

ಹೆಚ್ಚುವರಿಜಿಲ್ಲಾಧಿಕಾರಿ ಜಿ.ಅನುರಾಧಾ, ಡಾ.ಪಲ್ಲವಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.