ADVERTISEMENT

ಕಾಳಿಂಗ ಸರ್ಪ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 6:13 IST
Last Updated 12 ಏಪ್ರಿಲ್ 2022, 6:13 IST
ಮಂಚಾಲೆ ಗ್ರಾಮದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಮಂಜುನಾಥ್ ಹಿಡಿದು ಅರಣ್ಯಕ್ಕೆ ಬಿಟ್ಟರು.
ಮಂಚಾಲೆ ಗ್ರಾಮದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಮಂಜುನಾಥ್ ಹಿಡಿದು ಅರಣ್ಯಕ್ಕೆ ಬಿಟ್ಟರು.   

ತ್ಯಾಗರ್ತಿ: ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಾಲೆ ಪರಮೇಶ್ವರ್ ಅವರ ತೋಟದಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೋಮವಾರ ಕ್ಯಾದಿಗೊಪ್ಪದ ಕೆ.ಬಿ. ಮಂಜುನಾಥ್ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಮಂಜುನಾಥ್ ಹಾವು ಹಿಡಿಯುವುದರಲ್ಲಿ ಪ್ರವೀಣರಾಗಿದ್ದು, ಈಗಾಗಲೇ ಹಲವಾರು ಕಾಳಿಂಗಸರ್ಪವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ತಾಲ್ಲೂಕಿನಲ್ಲಿ ಕಾಳಿಂಗ ಸರ್ಪ ಕಂಡರೆ ಕೆ.ಬಿ. ಮಂಜುನಾಥ್ ಹಾಗೂ ದೇವರಾಜ್ ಅವರಿಗೆ ಜನರು ಕರೆ ಮಾಡುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT