ADVERTISEMENT

ಶಿವಮೊಗ್ಗ | ಜಾತಿ ಮೀರಿ ಬದುಕಿದ್ದ ರಾಣಿ ಚೆನ್ನಮ್ಮ: ಎಸ್.ಎನ್.ಚನ್ನಬಸಪ್ಪ

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2025, 2:20 IST
Last Updated 24 ಅಕ್ಟೋಬರ್ 2025, 2:20 IST
ಶಿವಮೊಗ್ಗದಲ್ಲಿ ಗುರುವಾರ ನಡೆದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು
ಶಿವಮೊಗ್ಗದಲ್ಲಿ ಗುರುವಾರ ನಡೆದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು   

ಶಿವಮೊಗ್ಗ: ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ ತನ್ನ ಸಾಮ್ರಾಜ್ಯದಲ್ಲಿ ಜನಸಾಮಾನ್ಯರನ್ನು ಒಗ್ಗೂಡಿಸಿಕೊಂಡು ಈ ದೇಶದ ಒಳಿತಿಗಾಗಿ ಸ್ವಾತಂತ್ರ್ಯದ ದೀವಿಗೆ ಹಚ್ಚಿದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಜಿಲ್ಲಾಡಳಿತ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕುವೆಂಪು ರಂಗಮಂದಿರಲ್ಲಿ ಆಯೋಜಿಸಿದ್ದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ರಾಣಿ ಚೆನ್ನಮ್ಮನ ಕೊಡುಗೆ ಅಪಾರ. ಬ್ರಿಟಿಷರು ಹಾಗೂ ಮೊಘಲರ ವಿರುದ್ದ ಹೋರಾಡಿದ ವೀರವನಿತೆ ಆಕೆ. ಸದಾ ಸಮಾಜಕ್ಕೆ ಒಳಿತಾಗಬೇಕೆಂದು ಯೋಚಿಸುತ್ತಿದ್ದರು. ಜಾತಿ ಭೇದದ ಗೊಡವೆ ಇಲ್ಲದೇ ಎಲ್ಲರನ್ನೂ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು ಎಂದು ಸ್ಮರಿಸಿದರು.

ADVERTISEMENT

ರಾಣಿ ಚೆನ್ನಮ್ಮನ ಆದರ್ಶವನ್ನು ಯುವ ಪಿಳಿಗೆಗಳಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಇದರಿಂದ ಅವರ ಹೋರಾಟದ ಬದುಕು, ಜೀವನಶೈಲಿ ಅರಿತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ನಾಟಕ ಅಕಾಡೆಮಿ ಜಿಲ್ಲಾ ಸಂಚಾಲಕ ಗಣೇಶ ಆರ್. ಕೆಂಚನಾಲ ಉಪನ್ಯಾಸ ನೀಡಿ, ‘ರಾಣಿ ಚೆನ್ನಮ್ಮ ಸದಾ ದೇಶ ಸೇವೆಗಾಗಿ ಹಾತೊರೆಯುತ್ತಿದ್ದರು. ಮೊಘಲರು, ಬ್ರಿಟಿಷರ ವಿರುದ್ದ ದಿಟ್ಟವಾಗಿ ಹೋರಾಡಿದ್ದರು. ದೇಶ, ರಾಜ್ಯದ ಸಂಗತಿಗಳು ಬಂದಾಗ ನಾವೆಲ್ಲರೂ ಒಗ್ಗಟ್ಟಾಗಬೇಕು’ ಎಂದರು. 

ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಮಹೇಶ್ವರಪ್ಪ, ಸಂಘಟನೆಯ ಕಾರ್ಯದರ್ಶಿ ಎಂ.ಸಿದ್ದೇಶ್ ಬೇಗೂರು, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಪ್ಪ ಮೆಡ್ಲೇರಿ, ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಟಿ.ಎಂ.ಕುಮಾರ್, ಎಎಸ್ಪಿ ರಮೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.