ADVERTISEMENT

ಮಳೆ ಆರ್ಭಟ: ಆ.30 ರವರೆಗೆ ಕೊಲ್ಲೂರು ಘಾಟಿ ಸಂಚಾರ ಬಂದ್‌

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಬಿಡುವು: ಜಲಾಶಯಗಳ ಮಟ್ಟ ಏರಿಕೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 12:34 IST
Last Updated 18 ಜೂನ್ 2021, 12:34 IST
ಶೃಂಗೇರಿ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.
ಶೃಂಗೇರಿ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.    

ಶಿವಮೊಗ್ಗ: ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಶುಕ್ರವಾರ ಮಳೆ ಕೊಂಚ ಬಿಡುವು ನೀಡಿದೆ. ಹೊಸನಗರದ ನಗರ, ತೀರ್ಥಹಳ್ಳಿಯ ಆಗುಂಬೆ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

ಸಾಗರ, ಭದ್ರಾವತಿ, ಶಿವಮೊಗ್ಗ, ಶಿಕಾರಿಪುರ, ಸೊರಬ ತಾಲ್ಲೂಕಿನಲ್ಲಿ ಸಾಧಾರಣ ತುಂತುರು ಮಳೆಯಾಗಿದೆ.

ಹೊಸನಗರ ತಾಲ್ಲೂಕು ನಾಗೋಡಿ ಬಳಿ ರಸ್ತೆ ಕುಸಿದಿದ್ದು, ತ್ವರಿತ ಕಾಮಗಾರಿ ಕೈಗೊಳ್ಳಲು ಅನುವಾಗುವಂತೆ ಆ.30ರವರೆಗೆ ಕೊಲ್ಲೂರು ಘಾಟಿ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ADVERTISEMENT

ಶೃಂಗೇರಿ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯಕ್ಕೆ 31,277 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಶಿವಮೊಗ್ಗ ನಗರದ ಬಳಿ ತುಂಗಾ ನದಿ ತುಂಬಿ ಹರಿಯುತ್ತಿದೆ. ತೀರ್ಥಹಳ್ಳಿಯ ರಾಮಮಂಟಪ ಮುಳುಗಲು ನಾಲ್ಕು ಅಡಿ ಬಾಕಿ ಇದೆ. 24 ಗಂಟೆಗಳ ಅವಧಿಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 2.6 ಅಡಿ ಹಾಗೂ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.20 ಅಡಿ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.