
ಕೋಣಂದೂರು: ‘ಬಿಎಸ್ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು’ ಎಂಬ ಶೀರ್ಷಿಕೆಯಡಿ ಜ.22ರ ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಬಿಎಸ್‌ಎನ್‌ಎಲ್ ಅಧಿಕಾರಿಗಳು ಶುಕ್ರವಾರ ಹುಂಚಾಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ ‘ಶ್ರದ್ಧಾಂಜಲಿ’ ಬ್ಯಾನರ್ ತೆರವುಗೊಳಿಸಿದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾಮಟ್ಟದ ಬಿಎಸ್ಎನ್‌ಎಲ್ ಅಧಿಕಾರಿ ರಾಜೇಶ್ ಮಾತನಾಡಿ, ತಾತ್ಕಾಲಿಕವಾಗಿ ನೆಟ್‌ವರ್ಕ್ ಸರಿಪಡಿಸಿದ್ದು, ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಸಮಸ್ಯೆ ಬಗೆಹರಿಸಲು ಬೇಕಾದ ಎಲ್ಲ ಏರ್ಪಾಡುಗಳನ್ನು ಮಾಡುವ ಭರವಸೆ ನೀಡಿದರು. ಅವರ ಭರವಸೆ ಮೇರೆಗೆ ಗ್ರಾಮಸ್ಥರು ಹುಂಚಾ ವೃತ್ತದಲ್ಲಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಲು ಸಮ್ಮತಿಸಿದರು.
‘ಪ್ರಜಾವಾಣಿ ವರದಿಯನ್ನು ಗಮನಿಸಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಲ್ಪಿಸುವಂತೆ ಸೂಚಿಸಿದ್ದರು. ಹೀಗಾಗಿ ಅಧಿಕಾರಿಗಳು ಬಂದು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು. ಸಮಸ್ಯೆ ಬಗೆಹರಿಯದಿದ್ದಲ್ಲಿ ಮುಂದಿನ ಹೋರಾಟ ತೀವ್ರವಾಗಿರುತ್ತದೆ’ ಎಂದು ಗ್ರಾಮಸ್ಥರು ತಿಳಿಸಿದರು.
ಗ್ರಾಮಸ್ಥರಾದ ಪುಂಡಲೀಕ ಬಾಬು, ಯದುಕುಮಾರ್, ಜಗದೀಶ, ಶ್ರೀಕಾಂತ್, ನಾಗರಾಜ್ ಬಿಲ್ಲೇಶ್ವರ, ಚಂದ್ರಕಾಂತ್, ಪೂರ್ಣಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.