ADVERTISEMENT

ಥ್ರೋಬಾಲ್‌: ಕೋಣಂದೂರು ಮಳಲೀಮಕ್ಕಿ ಶಾಲೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 4:40 IST
Last Updated 16 ಡಿಸೆಂಬರ್ 2025, 4:40 IST
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸಿದ್ದಾಪುರ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡ
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸಿದ್ದಾಪುರ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡ   

ಕೋಣಂದೂರು: ಸಮೀಪದ ಸಿದ್ದಾಪುರ(ಮಳಲೀಮಕ್ಕಿ)ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿಈಚೆಗೆ ವಿಭಾಗದ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಥ್ರೋಬಾಲ್ ಟೂರ್ನಿ ನಡೆದಿತ್ತು. ಮೈಸೂರು ಮತ್ತು ಸಿದ್ದಾಪುರ ತಂಡಗಳ ನಡುವಿನ ಪಂದ್ಯದಲ್ಲಿ ಸಿದ್ದಾಪುರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ವಿಜೇತ ವಿದ್ಯಾರ್ಥಿನಿಯರನ್ನು ಹಾಗೂ ತರಬೇತಿ ನೀಡಿದ ಶಿಕ್ಷಕ ಕೆ.ಜಿ.ಸತೀಶ್ ಅವರನ್ನು ಮುಖ್ಯ ಶಿಕ್ಷಕ ಟಿ.ಆರ್.ಲಕ್ಷ್ಮಣ್, ಸಿಬ್ಬಂದಿ,ಗ್ರಾಮಸ್ಥರು, ಪೋಷಕರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT