ADVERTISEMENT

KPC ಭೂಮಿ ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಸ್ತಾವ ಇಲ್ಲ: MLA ಬೇಳೂರು ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 5:22 IST
Last Updated 12 ನವೆಂಬರ್ 2025, 5:22 IST
ಗೋಪಾಲಕೃಷ್ಣ ಬೇಳೂರು
ಗೋಪಾಲಕೃಷ್ಣ ಬೇಳೂರು   

ಸಾಗರ: ‘ಮಲೆನಾಡು ಭಾಗದಲ್ಲಿರುವ ಕರ್ನಾಟಕ ವಿದ್ಯುತ್ ನಿಗಮಕ್ಕೆ ಸೇರಿದ ಯಾವುದೇ ಭೂ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರ ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಶ್ಚಿಮಘಟ್ಟ ಅಭಿವೃದ್ಧಿ ಕಾರ್ಯಪಡೆ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಕೆಪಿಸಿ ಭೂಮಿ ಹಸ್ತಾಂತರ ಕುರಿತು ಸರ್ಕಾರಕ್ಕೆ ಮನವಿ ನೀಡಿರುವುದು ಅವರ ವೈಯುಕ್ತಿಕ ನಿರ್ಧಾರ’ ಎಂದು ಹೇಳಿದರು.

‘ನಾಡಿಗೆ ಬೆಳಕು ನೀಡಲು ಜಲವಿದ್ಯುತ್ ಯೋಜನೆಗಾಗಿ ಈ ಭಾಗದ ಅನೇಕ ರೈತರು ತಮ್ಮ ಭೂಮಿಯನ್ನು ಕಳೆದುಕೊಂಡು ತ್ಯಾಗ ಮಾಡಿದ್ದಾರೆ. ಹೀಗಿರುವಾಗ ಕೆಪಿಸಿಗೆ ಸೇರಿದ ಹಾಗೂ ಮುಳುಗಡೆ ಸಂತ್ರಸ್ತ ರೈತರು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಶ್ನೆಯೆ ಇಲ್ಲ’ ಎಂದರು.

ADVERTISEMENT

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಗೊಳ್ಳಬೇಕು ಎಂದು ನಾನು ಒತ್ತಾಯಿಸಿದ್ದರಲ್ಲಿ ವೈಯುಕ್ತಿಕ ಹಿತಾಸಕ್ತಿ ಇಲ್ಲ. ಕೇಂದ್ರ ಸರ್ಕಾರ ಈ ಯೋಜನೆ ಬೇಡ ಎಂದು ತೀರ್ಮಾನಿಸಿದರೆ ನನ್ನ ತಕರಾರು ಇಲ್ಲ. ಯಾವುದೇ ದೊಡ್ಡ ಯೋಜನೆ ಕೈಗೊಂಡಾಗ ಪರಿಸರಕ್ಕೆ ಅಲ್ಪ ಪ್ರಮಾಣದ ಹಾನಿಯಾಗುವುದು ಸಹಜ’ ಎಂದು ಹೇಳಿದರು.

ಪ್ರಮುಖರಾದ ಸೋಮಶೇಖರ್ ಲ್ಯಾವಿಗೆರೆ, ಅನಿತಾ ಕುಮಾರಿ, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಗಿರೀಶ್ ಕೋವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.