ADVERTISEMENT

ಕೃಷಿ ವಿ.ವಿ ಸಂಸ್ಥಾಪನಾ ದಿನ 26ಕ್ಕೆ, ಘಟಿಕೋತ್ಸವ 28ಕ್ಕೆ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 5:36 IST
Last Updated 25 ಸೆಪ್ಟೆಂಬರ್ 2022, 5:36 IST

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 10ನೇ ಸಂಸ್ಥಾಪನಾ ದಿನಾಚರಣೆ ಸೆಪ್ಟೆಂಬರ್‌ 26ರಂದು ಹಾಗೂ 7ನೇ ಘಟಿಕೋತ್ಸವ ಸೆಪ್ಟೆಂಬರ್‌ 28ರಂದು ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ಆಯೋಜಿಸಲಾಗಿದೆ ಎಂದು ವಿವಿ ಕುಲಪತಿ ಡಾ.ಆರ್.ಸಿ. ಜಗದೀಶ್ ತಿಳಿಸಿದರು.

ಸಂಸ್ಥಾಪನಾ ದಿನಾಚರಣೆಯ ಸಾನ್ನಿಧ್ಯವನ್ನು ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.

ಶಾಸಕ ಎಚ್.ಹಾಲಪ್ಪಪ್ರಶಸ್ತಿ ವಿತರಣೆ ಮಾಡುವರು. ಕುಲಪತಿ ಡಾ.ಆರ್.ಸಿ. ಜಗದೀಶ್ ಅಧ್ಯಕ್ಷತೆ ವಹಿಸುವರು. ಸೆ.28ರಂದು ಬೆಳಿಗ್ಗೆ 11ಕ್ಕೆಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ಪದವಿ ಪ್ರದಾನ ಮಾಡುವರು. ಕೃಷಿ ಸಚಿವ ಬಿ.ಸಿ. ಪಾಟೀಲ್, ಹರಿಯಾಣದ ರೈತರ ಆಯೋಗದ ಅಧ್ಯಕ್ಷ ಡಾ. ಆರ್. ಎಸ್. ಪರೋಡ ಭಾಗವಹಿಸುವರು ಎಂದು ತಿಳಿಸಿದರು.

ADVERTISEMENT

355 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ, 79 ಎಂ.ಎಸ್ಸಿ ಪದವಿ, 10 ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 7 ಬಿ.ಎಸ್ಸಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕಗಳು, 13 ಎಂ.ಎಸ್ಸಿ ವಿದ್ಯಾರ್ಥಿಗಳಿಗೆ 14 ಚಿನ್ನದ ಪದಕಗಳು ಮತ್ತು 4 ಪಿಎಚ್‌ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿವಿ ಕುಲಸಚಿವ ಡಾ.ಲೋಕೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.