
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಕ್ಕಾಗಿ ಜನರು ಪಶ್ಚಾತ್ತಾಪ ಪಡುವಂತ್ತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಲೇವಡಿ ಮಾಡಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಧಿಕಾರಕ್ಕಾಗಿ ಸಿಎಂ ಮತ್ತು ಡಿಸಿಎಂ ಸಂಘರ್ಷಕ್ಕೆ ಇಳಿದಿದ್ದಾರೆ. ಈ ಸಂಘರ್ಷದಿಂದ ರಾಜ್ಯದ ಜನತೆ ಗೊಂದಲಕ್ಕೀಡಾಗಿದ್ದಾರೆ ಎಂದರು.
ಮಠಾಧೀಶರನ್ನು ಜಾತಿಗೆ ಸೀಮಿತಗೊಳಿಸಿ, ಅವರ ಪಕ್ಷದಲ್ಲಿಯೇ ಮಂತ್ರಿಗಳು, ಶಾಸಕರು, ಕಾರ್ಯಕರ್ತರನ್ನು ಮೂರು ಗುಂಪುಗಳನ್ನಾಗಿ ಮಾಡಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲ ಬಗೆಹರಿಯುವಂತೆ ಕಾಣುವುದಿಲ್ಲ. ಎಐಸಿಸಿಯು ಕೂಡ ದುರ್ಬಲವಾಗಿದೆ. ಸಿಎಂ ಮತ್ತು ಡಿಸಿಎಂ ಇಬ್ಬರ ಮಾತಿನಲ್ಲೂ ತಾಳಮೇಳ ಇಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ತೀರ್ಮಾನ ಮಾಡುವುದು ನಾನಲ್ಲ. ಹೈಕಮಾಂಡ್ ಮಾಡುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷರಾದರೂ ಕಾಂಗ್ರೆಸ್‌ನಲ್ಲಿ ಖರ್ಗೆಯವರಿಗೆ ಯಾವುದೇ ಬೆಲೆ ಇಲ್ಲ ಎಂಬುದನ್ನು ಅವರೇ ಒಪ್ಪಿಕೊಂಡಂತಾಗಿದೆ ಎಂದು ಲೇವಡಿ ಮಾಡಿದರು.
ಈ.ವಿಶ್ವಾಸ್, ಶ್ರೀಕಾಂತ್, ಬಾಲು, ಚನ್ನಬಸಪ್ಪ, ಲಿಂಗಮೂರ್ತಿ, ಶಂಕ್ರಾನಾಯ್ಕ, ರಾಜಣ್ಣ, ಕುಬೇರಪ್ಪ, ಚನ್ನಬಸಪ್ಪ ಇದ್ದರು.
ದ್ವೇಷ ಭಾಷಣ ವಿರೋಧಿ ಮಸೂದೆ ಜಾರಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ರಾಷ್ಟ್ರಭಕ್ತರಿಗೆ ಅನ್ಯಾಯವಾಗುವ ಈ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಬೇಕು. ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದುಕೆ.ಎಸ್.ಈಶ್ವರಪ್ಪ ಮಾಜಿ ಡಿಸಿಎಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.