ADVERTISEMENT

ವರ್ಗಾವಣೆ ದಂಧೆಯಲ್ಲ: ಈಶ್ವರಪ್ಪ ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 12:37 IST
Last Updated 24 ಸೆಪ್ಟೆಂಬರ್ 2019, 12:37 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂಬ ಹೇಳಿಕೆ ಸಮಂಜಸವಲ್ಲ. ಅದು ಸಹಜ ಪ್ರಕ್ರಿಯೆ. ನಂಬಿಕೆಯ ಅಧಿಕಾರಿಗಳನ್ನು ತಮಗೆ ಬೇಕಾದ ಸ್ಥಳಗಳಿಗೆ ಹಾಕಿಸಿಕೊಳ್ಳುವುದುತಪ್ಪೇನಲ್ಲಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಪಾದಿಸಿದರು.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಮಂಗಳವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧಿಕಾರ ವಿಕೇಂದ್ರೀಕರಣ ನೀತಿಯ ಅನ್ವಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲು ಕ್ರಮ ಕೈಗೊಳ್ಳಲಾಗುವುದು. ಟಾಸ್ಕ್‌ಫೋರ್ಸ್‌ ಸಮಿತಿಗಳಲ್ಲೂ ಶಾಸಕರೇ ಅಧ್ಯಕ್ಷರಾಗಿದ್ದಾರೆ. ಹಾಗಾಗಿ, ಜಿಲ್ಲಾ ಪಂಚಾಯಿತಿಗಳ ಅಧಿಕಾರ ಕಿತ್ತುಕೊಳ್ಳಲಾಗಿದೆ ಎಂಬ ಆಪಾದನೆ ಇದೆ. ಸರ್ಕಾರಗಳು ಶಾಸಕರ ಅಧಿಕಾರ ಮೊಟುಕು ಮಾಡಲು ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣ. ಶಾಸಕರಿಗೆ ಬೆಲೆ ಜಾಸ್ತಿ ಎನ್ನುವುದು ಗೊತ್ತಿರುವ ಸಂಗತಿಯೇ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಉತ್ತರ ಕರ್ನಾಟಕದ ಗ್ರಾಮೀಣ ಜನರು, ಜನ ಪ್ರನಿತಿಧಿಗಳು ಇಲಾಖೆಯ ಕೆಲಸಕ್ಕೆ ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಬೆಳಗಾವಿಯ ಸುವರ್ಣ ಸೌಧದಲ್ಲೇ ಕಚೇರಿ ತೆರೆಯಲಾಗುತ್ತಿದೆ. ವಿಧಾನಸಭಾಧ್ಯಕ್ಷರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಗನ್‌ಮ್ಯಾನ್ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.