ADVERTISEMENT

ಜಲಾನಯನ ಪ್ರದೇಶಗಳ ಪುನಃಶ್ಚೇತನ ‘ಖಾತ್ರಿ’

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 13:11 IST
Last Updated 12 ಮಾರ್ಚ್ 2020, 13:11 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶಿವಮೊಗ್ಗ ಸುತ್ತಲಿನಜಲಾನಯನ ಪ್ರದೇಶಗಳ ಪುನಃಶ್ಚೇತನ ಕಾರ್ಯ ಕೈಗೊಳ್ಳಲಾಗುವುದು.ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿ 9 ಜಿಲ್ಲೆಗಳಲ್ಲಿ ಈಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಯೋಜನೆಕುರಿತು ಮಾಹಿತಿ ಒದಗಿಸಲು ಹಾಗೂ ಕ್ರಿಯಾ ಯೋಜನೆ ರೂಪಿಸಲು ಮಾರ್ಚ್ 14ರಂದು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಇಒ, ಪಿಡಿಒಗಳಿಗೆಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ. ಮಾರ್ಚ್ 15ರಂದು ಕೋಲಾರದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದುವಿವರ ನೀಡಿದರು.

ಮಳೆಯ ನೀರು ವ್ಯರ್ಥವಾಗದಂತೆ ಭೂಮಿಯಲ್ಲಿಯೇ ಇಂಗಿ ಹೋಗುವಂತೆಕ್ರಮ ಕೈಗೊಳ್ಳಲಾಗುವುದು.ನದಿಯ ಜಲಾನಯನ ಪ್ರದೇಶಗಳಲ್ಲಿ ಸಸಿಗಳನ್ನು ನೆಡುವುದು, ಸಣ್ಣ ಚೆಕ್‍ಡ್ಯಾಂಗಳ ನಿರ್ಮಾಣ, ಇಂಗು ಗುಂಡಿಗಳ ನಿರ್ಮಾಣಮಾಡಲಾಗುವುದು. ಪ್ರಥಮ ಹಂತದಲ್ಲಿ ಪೂರ್ವಕ್ಕೆ ಹರಿಯುವ ನದಿಗಳ ಪುನಃಶ್ಚೇತನಕ್ಕೆಕ್ರಮ ಕೈಗೊಳ್ಳಲಾಗಿದೆ.ನದಿ ಮೂಲದ ಸಂರಕ್ಷಣೆಗೂ ಒತ್ತು ನೀಡಲಾಗುವುದು ಎಂದುಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ADVERTISEMENT

ಬೆಂಗಳೂರು ಗ್ರಾಮಾಂತರ, ರಾಮನಗರಜಿಲ್ಲೆಗಳಲ್ಲಿ ಈಗಾಗಲೇ ನದಿಗಳ ಪುನಃಶ್ಚೇತನ ಕಾರ್ಯ ಕೈಗೊಳ್ಳಲಾಗಿದೆ.ಈಗಶಿವಮೊಗ್ಗ, ಕೋಲಾರ, ತುಮಕೂರು, ಬಳ್ಳಾರಿ, ಯಾದಗಿರಿ, ಬೆಳಗಾವಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ, ಕೊಡಗು, ಉಡುಪಿ ಮತ್ತು ಕಾರವಾರ ಜಿಲ್ಲೆಯಎರಡುತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುತ್ತಿದೆ. ನದಿಗೆ ಸೇರುವ ಪ್ರಮುಖ ಹಳ್ಳಕೊಳ್ಳಗಳ ನಕ್ಷೆ ತಯಾರಿಸಿ, ಸಂರಕ್ಷಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.

ತುಂಗೆಗೆ ಚೆಕ್‍ಡ್ಯಾಂ

ತುಂಗಾ ನದಿಗೆ ಮತ್ತೂರು ಬಳಿ ನಿರ್ಮಿಸಲಾಗಿರುವ ಚೆಕ್‍ಡ್ಯಾಂರೀತಿ ಇನ್ನೂ ನಾಲ್ಕು ಚೆಕ್‍ಡ್ಯಾಂಗಳನ್ನು ನಿರ್ಮಿಸುವ ಕುರಿತು ಪ್ರಸ್ತಾವ ಸಲ್ಲಿಸಲು ಸಣ್ಣ ನೀರಾವರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದುವಿವರ ನೀಡಿದರು.

ಉದ್ಯೋಗ ಖಾತ್ರಿ ಉತ್ತಮ ಸಾಧನೆ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಎಲ್ಲ ಬಾಕಿ ಪಾವತಿಸಲಾಗಿದೆ. 2019-20ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಲಾಗಿದೆ.30 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ₨130 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಹೆಚ್ಚುವರಿಜಿಲ್ಲಾಧಿಕಾರಿ ಜಿ.ಅನುರಾಧಾ,ಯೋಜನಾ ನಿರ್ದೇಶಕ ವೀರಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.