ADVERTISEMENT

ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕಾಯಕಲ್ಪ: ಸಚಿವ ಕೆ.ಎಸ್.ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 8 ಮೇ 2020, 13:04 IST
Last Updated 8 ಮೇ 2020, 13:04 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಮೆಗ್ಗಾನ್ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಲಿದೆ. ಇಡೀ ಆಸ್ಪ‍ತ್ರೆಗೆ ಹೊಸ ರೀತಿಯ ಕಾಯಕಲ್ಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸೂಪರ್ ಸ್ಪೆಷಾಲಿಟಿಕಟ್ಟಡ ನಿರ್ಮಾಣವಾಗಿ10ವರ್ಷಗಳಾದರೂ ಆರಂಭಕ್ಕೆ ಕಾಲ ಕೂಡಿಬಂದಿರಲಿಲ್ಲ. ಒಂದು ವಾರದ ಒಳಗೆ ಹೃದ್ರೋಗ ಮತ್ತು ನರ ರೋಗ ವಿಭಾಗ ಆರಂಭವಾಗಲಿದೆ.ಮೆಗ್ಗಾನ್ ಆಸ್ಪತ್ರೆಯ ಮೂವರುಹೃದ್ರೋಗ ತಜ್ಞರು, ಒಬ್ಬ ನರರೋಗ ತಜ್ಞರ ಸೇವೆಸಿಗುತ್ತಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಕಟ್ಟಡದಲ್ಲೇ ಹೃದ್ರೋಗ ಮತ್ತು ನರರೋಗ ವಿಭಾಗದ ಒಪಿಡಿ ಆರಂಭವಾಗಲಿದೆ. ಎಲ್ಲ ಅಗತ್ಯ ಸೌಲಭ್ಯಗಳನ್ನೂ ಕಲ್ಪಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹುಟ್ಟಿನಿಂದಲೇ ಕಿವುಡುತನ ಇರುವ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸಲು ಮತ್ತು ವಾಕ್‍ಶ್ರವಣ ಕೇಂದ್ರದಲ್ಲಿ ಬಿಎಸ್ಸಿ (ಸ್ಪೀಚ್ ಅಂಡ್ ಹಿಯರಿಂಗ್) ತರಗತಿ ಆರಂಭಿಸಲು ₨ 4.84 ಕೋಟಿ ಅನುದಾನ ದೊರೆತಿದೆ.ಒಂದು ವಾರದ ಒಳಗೆ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಈ ಕೋರ್ಸ್ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಆರಂಭವಾಗಲಿದೆ ಎಂದರು.

ADVERTISEMENT

ಶುಶ್ರೂಷಕಿಯರು,ಟೆಕ್ನಿಷಿಯನ್ ಮತ್ತಿತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲು ಆದೇಶಿಸಲಾಗಿದೆ. ಎಮರ್ಜೆನ್ಸಿ ಮೆಡಿಸಿನ್ ಮತ್ತು ಜಿರಿಯಾಟ್ರಿಕ್ ವಿಭಾಗ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ವಿವರ ನೀಡಿದರು.

ಎಲ್ಲರಿಗೂ ನರೇಗಾ ಜಾಬ್‍ಕಾರ್ಡ್

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಂದು ಕುಟುಂಬಕ್ಕೆ ಒಂದು ಕಾರ್ಡ್ ಎಂಬ ನಿರ್ಬಂಧವಿಲ್ಲ. ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್‍ಗೆ ಅರ್ಜಿ ಸಲ್ಲಿಸಬಹುದು. ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಮತ್ತು ಆದಾರ ತೆರಿಗೆ ಪಾವತಿಸುವವರ ಹೊರತುಪಡಿಸಿ, ಯಾರು ಬೇಕಾದರೂ ಜಾಬ್ ಕಾರ್ಡ್‍ಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಕೆಲಸ ಬಯಸಿ ಅರ್ಜಿ ಸಲ್ಲಿಸುತ್ತಿದ್ದಾರೆ. 15 ದಿನಗಳ ಒಳಗೆ ಕೂಲಿ ಮೊತ್ತ ಪಾವತಿಸಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದರು.

ಚೆಕ್‍ಪೋಸ್ಟ್‍ನಲ್ಲಿ ಬಿಗಿ ಭದ್ರತೆ

ಜಿಲ್ಲೆಗೆ ಪ್ರಸ್ತುತ 3,200 ವಲಸೆ ಕಾರ್ಮಿಕರು ಬಂದಿದ್ದಾರೆ.ಸುಮಾರು 300 ವಲಸೆ ಕಾರ್ಮಿಕರು ಜಿಲ್ಲೆಯಿಂದ ಹೊರ ಹೋಗಿದ್ದಾರೆ. ಹೊರ ರಾಜ್ಯಗಳಿಂದ ಬಂದವರಿಗೆ, ಕೆಂಪು ವಲಯದಿಂದಬಂದವರಿಗೆಕ್ವಾರೆಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.