ಶಿವಮೊಗ್ಗ: ಸಾಗರ ತಾಲ್ಲೂಕಿನ ಆನಂದಪುರ ಬಳಿಯ ಮುಂಬಾಳು ಹತ್ತಿರ ಬಿ.ಎಚ್.ರಸ್ತೆಯಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್ ಸಾಗರದಿಂದ ಶಿವಮೊಗ್ಗಕ್ಕೆ, ಟ್ರಕ್ ಆನಂದಪುರದಿಂದ ಸಾಗರಕ್ಕೆ ತೆರಳುತ್ತಿದ್ದವು.
ಅಪಘಾತದಲ್ಲಿ ಬಸ್ ಚಾಲಕ ಶಿವಾನಂದ ನಾಯ್ಕ ಹಾಗೂ ನಿರ್ವಾಹಕ ಫಕೀರಪ್ಪ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿವನೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಗಾಯಾಳುಗಳನ್ನು ಮರ್ಕಜ್ ಸಂಸ್ಥೆಯ ಶಾಲಾ ಬಸ್‌ನಲ್ಲಿ ಸಾಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.