ADVERTISEMENT

ತೀರ್ಥಹಳ್ಳಿ: 20ರಿಂದ ಕುವೆಂಪು ಕುರಿತ ರಾಷ್ಟ್ರಮಟ್ಟದ ಕಮ್ಮಟ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 5:11 IST
Last Updated 9 ಜನವರಿ 2021, 5:11 IST
ಶಿಕಾರಿಪುರದ ಅಂಜುಮಾನ್ ಇಸ್ಲಾಮಿ ಜಾಮಿಯಾ ಮಸೀದಿ ಕಮಿಟಿ ನೂತನ ಅಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದ ಮೌಲಾನಾ ಅಮ್ಜದ್ ಹುಸೇನ್ ಹಾಫೀಜ್ ಕರ್ನಾಟಕಿ ಅವರನ್ನು ಮುಸ್ಲಿಂ ಮುಖಂಡರು ಅಭಿನಂದಿಸಿದರು
ಶಿಕಾರಿಪುರದ ಅಂಜುಮಾನ್ ಇಸ್ಲಾಮಿ ಜಾಮಿಯಾ ಮಸೀದಿ ಕಮಿಟಿ ನೂತನ ಅಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದ ಮೌಲಾನಾ ಅಮ್ಜದ್ ಹುಸೇನ್ ಹಾಫೀಜ್ ಕರ್ನಾಟಕಿ ಅವರನ್ನು ಮುಸ್ಲಿಂ ಮುಖಂಡರು ಅಭಿನಂದಿಸಿದರು   

ತೀರ್ಥಹಳ್ಳಿ: ಹಂಪಿ ಕನ್ನಡ ವಿಶ್ವವಿದ್ಯಾಲಯ, ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಸಹಯೋಗದಲ್ಲಿ ಜನವರಿ 20 ಮತ್ತು 21ರಂದು ‘ಕುವೆಂಪು ಸಾಹಿತ್ಯ ಮತ್ತು ಸಮಕಾಲೀನತೆ’ ವಿಷಯ ಕುರಿತ ಎರಡು ದಿನಗಳ ರಾಷ್ಟ್ರಮಟ್ಟದ ಕಮ್ಮಟ ಹಮ್ಮಿಕೊಳ್ಳಲಾಗಿದೆ.

ಕುಪ್ಪಳಿಯಲ್ಲಿ ನಡೆಯುವ ಕಾರ್ಯಾಗಾರಕ್ಕೆ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಕುವೆಂಪು ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ.ಬಿ.ಎಂ. ಪುಟ್ಟಯ್ಯ ತಿಳಿಸಿದ್ದಾರೆ.

20 ವರ್ಷದಿಂದ 40 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಜ. 16 ಕಡೆ ದಿನ. ಮಾಹಿತಿಗೆ 9448980105ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.