ಶಿವಮೊಗ್ಗ: ಏಜೆನ್ಸಿಯವರು ಪ್ರತಿ ತಿಂಗಳು ಸರಿಯಾಗಿ ವೇತನ ಬಿಡುಗಡೆ ಮಾಡುತ್ತಿಲ್ಲ. ಕಳೆದ ಮೂರು ತಿಂಗಳಿಂದ ವೇತನ ಕೊಟ್ಟಿಲ್ಲ. ಪಿಎಫ್, ಗ್ರ್ಯಾಚುಟಿ ಹಣವನ್ನು ಪಾವತಿಸುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆ ನೌಕರರು ಸೋಮವಾರ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿ ತಿಂಗಳು ವೇತನ ಸರಿಯಾಗಿ ಬಿಡುಗಡೆ ಆಗದೇ ಜೀವನ ನಡೆಸುವುದು ದುಸ್ತರವಾಗಿದೆ. ದೈನಂದಿನ ಬದುಕಿನ ವೆಚ್ಚಗಳು ಹೆಚ್ಚಿರುವುದರಿಂದ ಅದನ್ನು ನಿಭಾಯಿಸುವುದು ಕಷ್ಟವಾಗಿದೆ. ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸಲು ಆಗುತ್ತಿಲ್ಲ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.
ಪ್ರತೀ ತಿಂಗಳು ಸರಿಯಾಗಿ ವೇತನ ಪಾವತಿಸುವಂತೆ ಸಂಬಂಧಿಸಿದ ಏಜೆನ್ಸಿಯವರಿಗೆ ಸೂಚನೆ ನೀಡುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.