ADVERTISEMENT

ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗೆ ಕುವೆಂಪು ವಿವಿ ಸಿದ್ದತೆ

ಸೆ.1ರಿಂದ ಪುನರ್ ಮನನ ತರಗತಿ, ಸೆ.14ರಿಂದ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 12:39 IST
Last Updated 25 ಆಗಸ್ಟ್ 2020, 12:39 IST
ಕುವೆಂಪು ವಿಶ್ವವಿದ್ಯಾಲಯ
ಕುವೆಂಪು ವಿಶ್ವವಿದ್ಯಾಲಯ   

ಶಿವಮೊಗ್ಗ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸೆ.14ರಿಂದ ಪರೀಕ್ಷೆ ನಡೆಸಲು ಕುವೆಂಪು ವಿಶ್ವವಿದ್ಯಾಲಯ ಸಿದ್ದತೆ ನಡೆಸಿದೆ.

ಕೊರೊನಾ ಸೋಂಕು ಹೆಚ್ಚಳದ ಮಧ್ಯೆಯೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಹಾಗಾಗಿ,ಕುವೆಂಪು ವಿಶ್ವವಿದ್ಯಾಲಯವೂ ಸೆ.14ರಿಂದ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಸೆ.1ರಿಂದ ಪುನರ್ ಮನನ ತರಗತಿ ಆರಂಭ:ಸೆ.14ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಿದರು ಕುವಂಪು ವಿಶ್ವವಿದ್ಯಾಲಯ ಇದಕ್ಕಾಗಿ 11 ದಿನಗಳು ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿ ನಡೆಸಲು ಮುಂದಾಗಿದೆ. ಇದರಂತೆ ಸೆ.1ರಿಂದ 11ವರೆಗೆ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿ ಆರಂಭಗೊಳ್ಳಲಿದೆ.

ADVERTISEMENT

ಕೊರೊನಾ ಪರೀಕ್ಷೆಗೆ ಆರೋಗ್ಯ ಕೇಂದ್ರ:ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ವಿಶ್ವವಿದ್ಯಾಲಯ ಆರೋಗ್ಯ ಕೇಂದ್ರಗಳನ್ನುತೆರೆಯಲಿದೆ.ಪರೀಕ್ಷೆ ಅವಧಿಯಲ್ಲಿ ಪ್ರತಿ ವಿದ್ಯಾರ್ಥಿಗೂ ಆರೋಗ್ಯ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ವೇಳೆ ವಿದ್ಯಾರ್ಥಿಗೆ ಕೊರೊನಾ ಲಕ್ಷಣಗಳಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಎಸ್‌.ಎಸ್‌.ಪಾಟೀಲ್‌ ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ:ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲುನಿರ್ಧರಿಸಿರುವಕುವೆಂಪು ವಿಶ್ವವಿದ್ಯಾಲಯ ದೂರದಿಂದಬರುವ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಿದೆ. ಅದಕ್ಕಾಗಿ ಹಾಸ್ಟೆಲ್‌ಗಳನ್ನುಸ್ಯಾನಿಟೈಸಿಂಗ್ಮಾಡಲಾಗಿದೆ. ಸೆ.1ರಿಂದ ಪುನರ್ ಮನನ ತರಗತಿ ಹಿನ್ನೆಲೆ ವಿದ್ಯಾರ್ಥಿಗಳು ಈಗಾಗಲೇ ಹಾಸ್ಟೆಲ್‌ಗೆಬರುತ್ತಿದ್ದಾರೆ.ಒಂದು ಕೊಠಡಿಯಲ್ಲಿ ಇಬ್ಬರಿಗೆ ಅವಕಾಶ ನೀಡಲಾಗಿದೆ.

ಹಾಸ್ಟೆಲ್‌ನಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ಯಾನಿಂಗ್ನಡೆಸಲಾಗುತ್ತಿದೆಎಂದು ಕುವೆಂಪು ವಿಶ್ವವಿದ್ಯಾಲಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.