ADVERTISEMENT

ಕುವೆಂಪು ವಿವಿ: ಮೂರು ಕೇಂದ್ರಗಳ ವಿರುದ್ಧ ಕ್ರಮ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 15:43 IST
Last Updated 10 ಫೆಬ್ರುವರಿ 2020, 15:43 IST

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕೆಲವು ದೂರ ಶಿಕ್ಷಣ ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆದಿರುವ ದೂರುಗಳು ಬಂದಿವೆ.ಅಂತಹಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ.

ಬೆಂಗಳೂರಿನ ಸ್ಫೂರ್ತಿಎಜುಕೇಷನ್ ಟ್ರಸ್ಟ್, ಹುಬ್ಬಳ್ಳಿಯ ಸ್ಟೂಡೆಂಟ್ ಡೆವಲಪ್‌ಮೆಂಟ್‌ಟ್ರಸ್ಟ್‌, ಕೆಸಿಈ ಫೌಂಡೇಷನ್ ಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ನೀಡಲಾಗುವುದಿಲ್ಲ. ಈ ಕೇಂದ್ರಗಳಿಗೆ ಪರೀಕ್ಷೆ ನಡೆಸಲು ತೆರಳಿದ್ದ ವಿಶ್ವವಿದ್ಯಾಲಯದ ಸಿಬ್ಬಂದಿಗೆ ಮುಂದಿನ ಎರಡು ವರ್ಷ ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾಗುವುದಿಲ್ಲ. ಇಬ್ಬರು ವಿದ್ಯಾರ್ಥಿಗಳನ್ನೂಈಗಾಗಲೇ ಡಿಬಾರ್ ಮಾಡಲಾಗಿದೆ. ಮುಂದಿನ ಪರೀಕ್ಷೆಗಳು ಸುಮಗವಾಗಿ ನಡೆಸಲು ವಿಚಕ್ಷಣ ದಳ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT