ADVERTISEMENT

ಕೆರೆ ಸಂರಕ್ಷಣೆ ನಿರ್ಲಕ್ಷ್ಯ: ಕ್ರಿಮಿನಲ್ ಪ್ರಕರಣದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2019, 13:30 IST
Last Updated 22 ನವೆಂಬರ್ 2019, 13:30 IST

ಶಿವಮೊಗ್ಗ:ಕೆರೆ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದುಎಂದು ಜಿಲ್ಲಾಧಿಕಾರಿಕೆ.ಬಿ.ಶಿವಕುಮಾರ್ ಎಚ್ಚರಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕುಮಟ್ಟದಅಧಿಕಾರಿಗಳ ಜತೆ ನಡೆಸಿದ ವೀಡಿಯೊಸಂಚಾದದಲ್ಲಿ ಅವರು ಮಾತನಾಡಿದರು.

ಕೆರೆ ಒತ್ತುವರಿ ವರದಿ ಸಲ್ಲಿಸಲು ಸೂಚನೆ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ಸರ್ವೆ ಕಾರ್ಯ ನಡೆಸಬೇಕು. ವರದಿ ಸಲ್ಲಿಸಲುಸೂಚಿಸಿದ್ದರೂ ಹಲವು ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಂಡಿಲ್ಲ. ಮುಂದಿನ 15 ದಿನಗಳ ಒಳಗೆಸರ್ವೆ ಕಾರ್ಯ ಪೂರ್ಣಗೊಳಿಸಬೇಕು.ಹದ್ದುಬಸ್ತುಮಾಡಬೇಕು.ಕೆರೆಗಳ ಸುತ್ತ ಗಡಿ ಗುರುತಿಸಬೇಕು ಎಂದು ತಾಕೀತು ಮಾಡಿದರು.

ADVERTISEMENT

ಅತಿವೃಷ್ಟಿಯಿಂದಹಾನಿಯಾದಮನೆಗಳಿಗೆ ನೀಡುತ್ತಿರುವಪರಿಹಾರ ಕಾರ್ಯ ಚುರುಕುಗೊಳಿಸಬೇಕು.770 ಪ್ರಕರಣಗಳಲ್ಲಿ ಪರಿಹಾರ ವಿತರಣೆ ಕಾರ್ಯಆಗಬೇಕಿದೆ. ಗ್ರಾಮೀಣಪ್ರದೇಶದ86 ಪ್ರಕರಣಗಳಲ್ಲಿ ಜಿಪಿಎಸ್ ಮಾಡಬೇಕಾಗಿದೆ. ತಹಶೀಲ್ದಾರ್‌ಗಳುತಕ್ಷಣ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಅನಧಿಕೃತವಾಗಿ ನಿರ್ಮಿಸಿರುವ ಮನೆಗಳ ಪಟ್ಟಿ ಸಲ್ಲಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಉತ್ತಮ ರೀತಿಯಲ್ಲಿ ನಡೆದಿದೆ. ಇನ್ನೂ ಕೆಲವು ಕಡೆ ಪರಿಷ್ಕರಣೆಯಾಗಬೇಕಿದೆ.ಗೈರು ಹಾಜರಾಗಿರುವ ಮತದಾರರ ಹೆಸರು ಪರಿಷ್ಕರಿಸುವ ಕಾರ್ಯ ಪೂರ್ಣಗೊಳಿಸಬೇಕು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈ ಕಾರ್ಯ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದರು.

ಪಾಲಿಕೆ ಆಯುಕ್ತ ಚಿದಾನಂದ ವಟಾರೆ,ಹೆಚ್ಚುವರಿಜಿಲ್ಲಾಧಿಕಾರಿ ಜಿ.ಅನುರಾಧಾ,ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.