ADVERTISEMENT

ಸಿಗಂದೂರು ಲಾಂಚ್‌ನಲ್ಲಿ ನಕಲಿ ಟಿಕೆಟ್: ಪಂಚಾಯಿತಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 20:23 IST
Last Updated 16 ಸೆಪ್ಟೆಂಬರ್ 2019, 20:23 IST

ಸಾಗರ: ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಸಂಚರಿಸುವ ಸಿಗಂದೂರು ಲಾಂಚ್‌ನಲ್ಲಿ ಪ್ರಯಾಣಿಕರಿಗೆ ನಕಲಿ ಟಿಕೆಟ್ ನೀಡಿ ಹಣ ದುರುಪಯೋಗ ಮಾಡಲಾಗಿದೆ ಎಂದು ತುಮರಿ ಪಂಚಾಯಿತಿ ವಿರುದ್ಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸೋಮವಾರ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.

ಕಳಸವಳ್ಳಿ ದಡದಿಂದ ಲಾಂಚ್‌ನಲ್ಲಿ ಸಂಚರಿಸುವ ಪ್ರಯಾಣಿಕರಿಂದ ತುಮರಿ ಪಂಚಾಯಿತಿ ಮೂಲಕ ಹಣ ವಸೂಲಿ ಮಾಡಲಾಗುತ್ತಿತ್ತು. ತಲಾ ₹ 30 ಮೌಲ್ಯದ 3,400 ಟಿಕೆಟ್‌ಗಳನ್ನು ತಾಲ್ಲೂಕು ಪಂಚಾಯಿತಿ ಅನುಮತಿ ಪಡೆಯದೇ ಗ್ರಾಮ ಪಂಚಾಯಿತಿ ಮುದ್ರಿಸಿ ಬಳಸಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಗ್ರಾಮ ಪಂಚಾಯಿತಿ ವತಿಯಿಂದ ನಡೆಸಲಾಗುವ ಯಾವುದೇ ಹಣಕಾಸಿನ ವಹಿವಾಟು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪಂಚಾಯಿತಿ ಪಿಡಿಒ ಹಾಗೂ ಅಧ್ಯಕ್ಷರದ್ದಾಗಿದ್ದು ನಕಲಿ ಟಿಕೆಟ್ ಮುದ್ರಿಸಿ ಬಳಸಿರುವ ಸಂಬಂಧ ತುಮರಿ ಪಿಡಿಒ ಇಮ್ತಿಯಾಜ್ ಪಾಷ, ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಸ್ವಾಮಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.