ತೀರ್ಥಹಳ್ಳಿ: ರಾಜ್ಯದಲ್ಲಿ ಕೇಸರಿ ಶಾಲು–ಹಿಜಾಬ್ ವಿವಾದವನ್ನು ತಣಿಸಲು ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಈ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಇಲ್ಲಿನ ತುಂಗಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಬಿ. ಗಣಪತಿ ಅವರು ಕಾಲೇಜು ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ವಿವಾದ ಬೂದಿ ಮುಚ್ಚಿದ ಕೆಂಡದಂತಿದ್ದು, ಡಾ.ಬಿ. ಗಣಪತಿ ಅವರು ಮಾತ್ರ ವಿಭಿನ್ನವಾಗಿ ಯೋಚಿಸುವ ಮೂಲಕ ಬಿಡುವಿನ ವೇಳೆಯಲ್ಲಿ ಕಾಲೇಜು ಪ್ರಾಂಗಣವನ್ನು ಸ್ವಚ್ಛಗೊಳಿಸಿದ್ದಾರೆ.
ಕಾಲೇಜು ಆವರಣದಲ್ಲಿರುವ ಗಿಡಗಳ ಬುಡವನ್ನು ಸ್ವತಃ ಹಾರೇಕೋಲಿನಿಂದ ಅಗೆದು ಸ್ವಚ್ಛಗೊಳಿಸಿದ್ದಾರೆ. ಔಷಧೋಪಚಾರ ಮಾಡಿದ್ದಾರೆ. ಇವರೊಂದಿಗೆ ಇಂಗ್ಲಿಷ್ ಪ್ರಾಧ್ಯಾಪಕ ನಟರಾಜ್ ಅರಳಸುರಳಿ ಮತ್ತು ಇಬ್ಬರು ಸಿಬ್ಬಂದಿ ಕೈ ಜೋಡಿಸಿದ್ದಾರೆ. ಇವರ ಈ ಕಾರ್ಯಕ್ಕೆ ತಾಲ್ಲೂಕಿನಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.