ಪ್ರಜಾವಾಣಿ ವಾರ್ತೆ
ಸೊರಬ: ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯು ಮೃತಪಟ್ಟ ಘಟನೆ ತಾಲ್ಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮಸ್ಥರೊಬ್ಬರು ತಮ್ಮ ಬೆಳೆ ರಕ್ಷಣೆಗಾಗಿ ಹಂದಿಗೆ ತಂತಿ ಉರುಳು ಹಾಕಿದ್ದು, ಅದರಲ್ಲಿ ಚಿರತೆ ಸಿಲುಕಿಕೊಂಡಿದೆ. ಸ್ಥಳೀಯರು ಚಿರತೆ ಕೂಗುವುದನ್ನು ಕಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಅರಣ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.