ADVERTISEMENT

ಲಿಂಗನಮಕ್ಕಿ: ಕಳೆದ ವರ್ಷಕ್ಕಿಂತ 20 ಅಡಿ ಹೆಚ್ಚು ನೀರು ಸಂಗ್ರಹ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 5:50 IST
Last Updated 12 ಜುಲೈ 2021, 5:50 IST
ಕಾರ್ಗಲ್ ಸಮೀಪದ ಲಿಂಗನಮಕ್ಕಿ ಜಲಾಶಯದಲ್ಲಿ ಭಾನುವಾರ ನೀರು ಸಂಗ್ರಹವಾಗಿರುವುದು. ಕಳೆದ ವರ್ಷಕ್ಕಿಂತ ಈ ಬಾರಿ 20 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ.
ಕಾರ್ಗಲ್ ಸಮೀಪದ ಲಿಂಗನಮಕ್ಕಿ ಜಲಾಶಯದಲ್ಲಿ ಭಾನುವಾರ ನೀರು ಸಂಗ್ರಹವಾಗಿರುವುದು. ಕಳೆದ ವರ್ಷಕ್ಕಿಂತ ಈ ಬಾರಿ 20 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ.   

ಕಾರ್ಗಲ್: ‘ನಾಡಿಗೆ ಬೆಳಕು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಮುಂಗಾರು ಮಳೆಗೆ ಉತ್ತಮವಾಗಿದ್ದು, ಕಳೆದ ಸಾಲಿಗಿಂತ ಈ ಬಾರಿ 20 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ’ ಎಂದು ಕೆಪಿಸಿ ಅಧೀಕ್ಷಕ ಎಂಜಿನಿಯರ್ ಆರ್.ಶಿವಕುಮಾರ್ ತಿಳಿಸಿದರು.

‘ಸಮುದ್ರ ಮಟ್ಟದಿಂದ 1,819 ಅಡಿ ಎತ್ತರದ ಗರಿಷ್ಠ ಮಟ್ಟದ ಜಲ ಸಂಗ್ರಹ ಸಾಮರ್ಥ್ಯ ಹೊಂದಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಭಾನುವಾರ 1,784.05 ಅಡಿ ನೀರು ಸಂಗ್ರಹವಾಗಿದೆ. ಕಳೆದ ಸಾಲಿನಲ್ಲಿ ಇದೇ ದಿನ 1,765 ಅಡಿ ನೀರು ಸಂಗ್ರಹವಾಗಿತ್ತು. ಪ್ರಸಕ್ತ ಸಾಲಿನಲ್ಲಿ ಈಗಾಗಲೇ ಜಲಾನಯನ ಪ್ರದೇಶದಲ್ಲಿ 107.1 ಸೆಂ.ಮೀ. ಮಳೆ ಸುರಿದಿದೆ. ಮುಂಗಾರು ಈ ಬಾರಿ ಆರಂಭದಲ್ಲಿ ಉತ್ತಮವಾಗಿ ಸುರಿದು ಮಧ್ಯದಲ್ಲಿ 15 ದಿನಗಳ ಕಾಲ ವಿಶ್ರಾಂತಿ ನೀಡಿತ್ತು. ಪುನರ್ವಸು ಮಳೆ ಮತ್ತೆ ಉತ್ತಮ ಆರಂಭ ಹೊಂದಿದ್ದು, ಆಶಾದಾಯಕ ಬೆಳವಣಿಗೆಯಾಗಿದೆ’ ಎಂದು ಅವರು ತಿಳಿಸಿದರು.

‘ಲಿಂಗನಮಕ್ಕಿ ಜಲವಿದ್ಯುದಾಗರ ದಲ್ಲಿ ಗರಿಷ್ಠ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಮಹಾತ್ಮ ಗಾಂಧಿ ಜಲವಿದ್ಯುದಾಗರ, ಶರಾವತಿ ಜಲವಿದ್ಯುದಾಗರಗಳಲ್ಲಿ ಶರಾವತಿ ಕಣಿವೆ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ನೀರಿನಿಂದ ವಿದ್ಯುತ್ ಉತ್ಪಾದನೆಯನ್ನು ಮಾಡಲಾಗುತ್ತಿದೆ. ಇದು ಜಲಾಶಯದ ನೀರು ಹೆಚ್ಚಾಗಲು ಕಾರಣವಾಗಿದೆ’ ಎಂದು ಕೆಪಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.