ADVERTISEMENT

ಲಾಕ್‌ಡೌನ್ ಉಲ್ಲಂಘನೆ: ಗೃಹ ಸಚಿವರ ಸ್ವಕ್ಷೇತ್ರದಲ್ಲೇ ಅದ್ದೂರಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 19:22 IST
Last Updated 8 ಜನವರಿ 2022, 19:22 IST
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮದಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ಶನಿವಾರ ಜಾತ್ರೆ ನಡೆಯಿತು.
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮದಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ಶನಿವಾರ ಜಾತ್ರೆ ನಡೆಯಿತು.   

ತೀರ್ಥಹಳ್ಳಿ: ಸುಬ್ರಮಣ್ಯ ಷಷ್ಠಿ ಅಂಗವಾಗಿ ಗೃಹ ಸಚಿವರ ಸ್ವಕ್ಷೇತ್ರವಾದ ತಾಲ್ಲೂಕಿನ ಅರಳಸುರುಳಿ ಗ್ರಾಮದಲ್ಲಿ ಕೋವಿಡ್ ಲಾಕ್‌ಡೌನ್
ನಿಯಮ ಉಲ್ಲಂಘಿಸಿ ಶನಿವಾರ ಜಾತ್ರೆ ನಡೆಯಿತು.

ಬೆಳಿಗ್ಗೆಯಿಂದ ನಡೆದ ಜಾತ್ರಾ ಮಹೋತ್ಸವದಲ್ಲಿ ನೂರಾರು ಭಕ್ತಾದಿಗಳು ಕೋವಿಡ್ ಮುಂಜಾಗ್ರತಾ ಕ್ರಮ, ಅಂತರ ಕಾಯ್ದುಕೊಳ್ಳದೇ ಭಾಗವಹಿಸಿದ್ದರು. ವಿಷಯ ತಿಳಿದ ಪೊಲೀಸರು ಮಧ್ಯಾಹ್ನ ಮೂರೂವರೆ ಸುಮಾರಿಗೆ ಜಾತ್ರೆಯನ್ನು ಬಂದ್ ಮಾಡಿಸಿದರು.

‘ಅರಳಸುರಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮ ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕಾರ ನೀಡಿದೆ. ರಾಜ್ಯ ಸರ್ಕಾರ ಕೊರೋನಾ ನಿಯಮ ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸಿದ್ದಾರೆ. ರಾಜ್ಯದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಕಾನೂನು ಪಾಲನೆ ಆಗಿಲ್ಲ’ ಎಂಬ ಆರೋಪ ಕೇಳಿ ಬರುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.