ADVERTISEMENT

ಲೋಕಸಭೆ ಚುನಾವಣೆ | ಬಿಜೆಪಿಗೆ 400ಕ್ಕೂ ಅಧಿಕ ಸ್ಥಾನ: ಬಿ.ವೈ.ರಾಘವೇಂದ್ರ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 14:24 IST
Last Updated 9 ಮಾರ್ಚ್ 2024, 14:24 IST
<div class="paragraphs"><p>ಬಿ.ವೈ.ರಾಘವೇಂದ್ರ</p></div>

ಬಿ.ವೈ.ರಾಘವೇಂದ್ರ

   

ಶಿವಮೊಗ್ಗ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯು ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳ ಜತೆಗೆ ರಾಷ್ಟ್ರೀಯ ವಿಚಾರಗಳನ್ನಿಟ್ಟುಕೊಂಡು ಚುನಾವಣೆ ಎದುರಿಸಲಿದೆ. ನಮ್ಮ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ತಮ್ಮ ಶಕ್ತಿ ತೋರಿಸಲಿದ್ದಾರೆ’ ಎಂದರು.

ADVERTISEMENT

‘ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಘವೇಂದ್ರ, ಈ ಹಿಂದೆ ನಡೆದ ಎಲ್ಲ ಚುನಾವಣೆಗಳಲ್ಲಿ ನೇರ ಸ್ಪರ್ಧೆ ಎದುರಿಸಿದ್ದೇನೆ. ಬಂಗಾರಪ್ಪ ಸ್ಪರ್ಧಿಸಿದಾಗಲೂ ನೇರ ಸ್ಪರ್ಧೆ ಇತ್ತು. ಯಡಿಯೂರಪ್ಪ ಸ್ಪರ್ಧಿಸಿದಾಗ ಮಾತ್ರ ತ್ರಿಕೋನ ಸ್ಪರ್ಧೆ ಇತ್ತು. ಎಲ್ಲ ಸವಾಲುಗಳನ್ನು ಬಿಜೆಪಿ ಎದುರಿಸಿದೆ. ಈ ಬಾರಿಯೂ ಎದುರಿಸುತ್ತೇವೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು ತಾತ್ಕಾಲಿಕವಷ್ಟೇ’ ಎಂದರು.

‘ಕುಮಾರ್ ಬಂಗಾರಪ್ಪ ಅವರ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ವೈಯಕ್ತಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈಗ ಚುನಾವಣೆ ಬಂದಿದೆ. ಈ ಸಂದರ್ಭದಲ್ಲಿ ತಮ್ಮನ್ನು ತಾವು ಚುನಾವಣೆಗಾಗಿ ತೊಡಗಿಸಿಕೊಳ್ಳುತ್ತಾರೆ’ ಎಂದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಶೀಘ್ರ ಬಿಡುಗಡೆ: ಬಿಎಸ್‌ವೈ
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಶೀಘ್ರ ಬಿಡುಗಡೆ ಆಗಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ  ಭಾನುವಾರ ನಾನು ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಬಹುತೇಕ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದರು. ಜೆಡಿಎಸ್ ಗೆ ಸ್ಥಾನಗಳ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಯಾರು ಯಾರಿಗೆ ಯಾವ ಕ್ಷೇತ್ರ ಕೊಡುತ್ತಾರೆಯೋ ಗೊತ್ತಿಲ್ಲ. ಕ್ಷೇತ್ರ ಹಂಚಿಕೆ ಬಗ್ಗೆ ಅಂತಿಮ ಚರ್ಚೆ ನಡೆಯುತ್ತಿದ್ದು ನಾಳೆ ತೀರ್ಮಾನ ಕೈಗೊಳ್ಳಲಾಗುವುದು. ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗುವುದಿಲ್ಲ ಎಂಬ ಚರ್ಚೆ ನಡೆದಿಲ್ಲ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಸಂತೋಷವೇ. ಕಾಂಗ್ರೆಸ್‌ನಿಂದ ಯಾರಾದರೂ ಅಭ್ಯರ್ಥಿ ಸ್ಪರ್ಧಿಸಲೇಬೇಕಲ್ಲವೇ ಎಂದು ಮಾರ್ಮಿಕವಾಗಿ ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.