
ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿತು.
ಪಾಲಿಕೆಯ ನಲ್ಮ್ ವಿಭಾಗ, ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ವಿಭಾಗ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪೊಲೀಸರು ಪರಿಶೀಲಿಸಿದರು.
ಸರ್ಕಾರದ ಆದೇಶದ ಬಳಿಕ ಇ-ಖಾತೆ ಮತ್ತು ಬಿ-ಖಾತೆ ಇದುವರೆಗೆ ಒಟ್ಟು ಎಷ್ಟು ಖಾತೆ ಮಾಡಲಾಗಿದೆ. ಎಷ್ಟು ಬಾಕಿ ಉಳಿದಿವೆ ಮತ್ತು ಯಾವ ಹಂತದಲ್ಲಿದೆ ಎಂದು ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಅಧಿಕಾರಿಗಳಿಗೆ ಎಲ್ಲಾ ದಾಖಲೆಗಳನ್ನು ನೀಡುವಂತೆ ತಮ್ಮ ಕೈಕೆಳಗಿನ ಅಧಿಕಾರಿಗಳಿಗೆ ಸೂಚಿಸಿದ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಪಾಲಿಕೆಗೆ ಯಾವಾಗ ಬಂದರೂ ಲೋಕಾಯುಕ್ತ ಪೊಲೀಸರಿಗೆ ನಮ್ಮ ಸ್ವಾಗತವಿದೆ. ಇಲ್ಲಿ ಎಲ್ಲಾ ಕಾರ್ಯಚಟುವಟಿಕೆ ಪಾರದರ್ಶಕವಾಗಿ ನಿರ್ವಹಿಸುತ್ತಿದ್ದೇವೆ ಎಂದು ಮಾಧ್ಯಮಗಳಿಗೆ ತಿಳಿಸಿದರು.
ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್ಪೆಕ್ಟರ್‌ಗಳಾದ ಗುರುರಾಜ್ ಮೈಲಾರ, ರುದ್ರೇಶ್, ವೀರಬಸಪ್ಪ ಮತ್ತು ಸಿಬ್ಬಂದಿಯ ತಂಡದಿಂದ ಪರಿಶೀಲನೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.