ಎಸ್.ಪ್ರದೀಪ್
ಶಿವಮೊಗ್ಗ: ಇಲ್ಲಿನ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಹಾಗೂ ಸಹಾಯಕ ಸಂಶೋಧನಾ ನಿರ್ದೇಶಕ ಎಸ್.ಪ್ರದೀಪ್ ಅವರ ನಿವಾಸದ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ದೂರಿನ ಹಿನ್ನೆಲೆಯಲ್ಲಿ ಪ್ರದೀಪ್ ಅವರ ಶಿವಮೊಗ್ಗದ ಪ್ರಿಯದರ್ಶಿನಿ ಲೇಔಟ್ ಒಂದನೇ ಮುಖ್ಯ ರಸ್ತೆಯಲ್ಲಿರುವ ನಿವಾಸ, ಶಿಕಾರಿಪುರ ತಾಲ್ಲೂಕಿನ ಭದ್ರಾಪುರದಲ್ಲಿ ನಾಲ್ಕು ಎಕರೆ ತೋಟದಲ್ಲಿರುವ ಮನೆ ಹಾಗೂ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಕಾಳಶೆಟ್ಟಿ ಕೊಪ್ಪದ 10.5 ಎಕರೆ ತೋಟದಲ್ಲಿರು ಮನೆ ಹಾಗೂ ಅವರ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಪ್ರದೀಪ್ ಅವರು ಕಳೆದ 16 ವರ್ಷಗಳಿಂದ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧ ನ ಅ ಕೇಂದ್ರದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದ ತಂಡ ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.