ADVERTISEMENT

ಸರ್ಕಾರ ಸಮರ್ಪಕವಾಗಿ ಕೆಲಸ ಮಾಡುತ್ತಿದೆ: ಮಾದಾರಚನ್ನಯ್ಯ

ಶಾಸಕ ಕೆ.ಎಸ್.ಈಶ್ವರಪ್ಪ ಮನೆಗೆ ಭೇಟಿ ನೀಡಿದ ಮಾದಾರಚನ್ನಯ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 5:54 IST
Last Updated 3 ಆಗಸ್ಟ್ 2022, 5:54 IST
ಶಿವಮೊಗ್ಗದ ತಮ್ಮ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಶಾಸಕ ಕೆ.ಎಸ್.ಈಶ್ವರಪ್ಪ ಗೌರವಿಸಿದರು
ಶಿವಮೊಗ್ಗದ ತಮ್ಮ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಶಾಸಕ ಕೆ.ಎಸ್.ಈಶ್ವರಪ್ಪ ಗೌರವಿಸಿದರು   

ಶಿವಮೊಗ್ಗ: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಪ್ರಕರಣ ಬೇಧಿಸುವಲ್ಲಿ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡುತ್ತಿದೆ ಎಂದು ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈಶ್ವರಪ್ಪ ಮನೆಗೆ ಭೇಟಿ: ಬೆಳಿಗ್ಗೆ ಶಾಸಕ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಸ್ವಾಮೀಜಿಭೇಟಿ ನೀಡಿದ್ದರು. ಈ ವೇಳೆ ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಸ್ವಾಮೀಜಿ ಅವರನ್ನು ಗೌರವಿಸಿದರು.

ADVERTISEMENT

‘ಮಂಗಳಗೌರಿ ವ್ರತ, ಶ್ರಾವಣ ಮಾಸದ ಕಾರಣ ಈಶ್ವರಪ್ಪ ಅವರ ಮನೆಗೆ ಭೇಟಿ ನೀಡಿದ್ದೇನೆ. ಈ ಮನೆಯಲ್ಲೂ ಮಠದ ವಾತಾವರಣವೇ ಇದೆ. ನಮ್ಮ ಮಠದೊಂದಿಗೆ ಈಶ್ವರಪ್ಪ ಅವರ ಬಾಂಧವ್ಯ ಬಹಳ. ಹೀಗಾಗಿ ಶಿವಮೊಗ್ಗಕ್ಕೆ ಬಂದಾಗ ಅವರ ಮನೆಗೆ ಭೇಟಿ ನೀಡದಿದ್ದರೆ ಮನಸ್ಸಿಗೆ ಕಸಿವಿಸಿ’ ಎಂದರು.

ನಂತರ ಸ್ವಾಮೀಜಿ ಪುರಲೆಯಲ್ಲಿ ನಿರ್ಮಿಸಿರುವ ದುರ್ಗಾಂಬಾ ದೇವಸ್ಥಾನದ ಕಲಶ ಪ್ರತಿಷ್ಠಾಪನಾ ಕಾರ್ಯದಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.