ADVERTISEMENT

ಕರಾವಳಿ ಜಿಲ್ಲೆ ಕೈಬಿಡದಿರಲು ಎಂಎಡಿಬಿ ನಿರ್ಧಾರ

ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ ಒಮ್ಮತದ ನಿರ್ಣಯ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 9:54 IST
Last Updated 10 ಅಕ್ಟೋಬರ್ 2020, 9:54 IST
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆ ನಡೆಯಿತು.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆ ನಡೆಯಿತು.   

ಶಿವಮೊಗ್ಗ: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಿಂದ ಹೊರಗಿಡುವ ಪ್ರಸ್ತಾವವನ್ನುಶನಿವಾರ ನಡೆದ ಮಂಡಳಿಯ ಸರ್ವ ಸದಸ್ಯರಸಭೆ ಒಮ್ಮತದಿಂದ ತಿರಸ್ಕರಿಸಿತು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಮಂಡಳಿಯ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿತ್ತು.

ಶಿರಸಿ, ಕಾರ್ಕಳದಂತಹ ಕರಾವಳಿಯ ಹಲವು ತಾಲ್ಲೂಕುಗಳುಮಲೆನಾಡು ವ್ಯಾಪ್ತಿಯಲ್ಲಿ ಬರುತ್ತವೆ. ಹಾಗಾಗಿ, ಮಂಡಳಿ ವ್ಯಾಪ್ತಿಯಲ್ಲಿ ಮುಂದುವರಿಸಬೇಕಿದೆ. ಈಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲುನಿರ್ಧರಿಸಲಾಯಿತು.

ADVERTISEMENT

ಪ್ರಸ್ತುತ ಸಾಲಿನಲ್ಲಿ 845 ಕಾಮಗಾರಿಗಳನ್ನು ಮುಂದುವರಿಸಲು ಸರ್ಕಾರ ಅನುಮೋದನೆ ನೀಡಿದೆ.ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ₹ 33 ಕೋಟಿ ಅಗತ್ಯವಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ತಿಳಿಸಿದರು.

845 ಕಾಮಗಾರಿಗಳಲ್ಲಿ348 ಕಾಮಗಾರಿಗಳು ಪೂರ್ಣಗೊಂಡಿವೆ.₹23 ಕೋಟಿ ಭರಿಸಲಾಗಿದೆ. 497 ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಇದೇ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 2019-20ನೇ ಸಾಲಿನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹ 1 ಕೋಟಿ ಅನುದಾನ ಘೋಷಿಸಲಾಗಿದೆ. ಆದರೆ, ಅನುದಾನ ಬಿಡುಗಡೆಯಾಗಿಲ್ಲ ಎಂದುಮಾಹಿತಿ ನೀಡಿದರು.

ಸಾಲ ಪಡೆಯಲು ಸಲಹೆ:ಮಂಡಳಿಯ ಅಭಿವೃದ್ಧಿಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಪಡೆಯುವ ಜತೆಗೆ,ಹಣಕಾಸು ಸಂಸ್ಥೆಗಳಿಂದಲೂ ಸಾಲ ಪಡೆಯಲು ಬೈಲಾದಲ್ಲಿ ಅವಕಾಶವಿದೆ. ನಬಾರ್ಡ್ ಅಥವಾ ವಿಶ್ವಬ್ಯಾಂಕ್‍ನಿಂದ ಸಾಲ ಪಡೆಯುವ ಕುರಿತು ಪ್ರಸ್ತಾವ ಸಿದ್ಧಪಡಿಸಿ ಯೋಜನಾ ಇಲಾಖೆಯ ಅನುಮೋದನೆಗೆ ಸಲ್ಲಿಸಲುಶಾಸಕರಾದ ಸುನೀಲ್ ಕುಮಾರ್‌,ಕುಮಾರ ಬಂಗಾರಪ್ಪ ಸಲಹೆ ನೀಡಿದರು.

ಅನುದಾನಕ್ಕೆ ಮನವಿ: ಅಧ್ಯಕ್ಷರ ವಿವೇಚನಾ ಕೋಟಾದಲ್ಲಿ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರು ಮಾಡಬೇಕುಎಂದು ಶಿವಮೊಗ್ಗಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್‌, ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜಯಶ್ರೀ ಮೊಗೇರ ಮನವಿ ಮಾಡಿದರು.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯರಾದ ಆರ್. ಪ್ರಸನ್ನ ಕುಮಾರ್, ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್,ಎಂಎಡಿಬಿ ಕಾರ್ಯದರ್ಶಿ ಮಣಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.