
ಆನವಟ್ಟಿ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಪುತ್ರ ಎಸ್.ಮಧು ಬಂಗಾರಪ್ಪ ಅವರೂ ತಮ್ಮ ತಂದೆಯವರ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದಗೌಡ ಬಿ. ಪಾಟೀಲ ಶ್ಲಾಘಿಸಿದರು.
ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಅಂಗವಾಗಿ ಬಂಗಾರಪ್ಪ ಅಭಿಮಾನಿಗಳ ಬಗಳ, ಮಧು ಬಂಗಾರಪ್ಪ ಅಭಿಮಾನಿಗಳ ಬಗಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು, ಬ್ರೇಡ್ ವಿತರಿಸಿದ ಬಳಿಕ ಮಾತನಾಡಿದರು.
ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಹೋಬಳಿ ಮಟ್ಟದಲ್ಲಿ ಕೆಪಿಎಸ್ ಮಾದರಿ ಶಾಲೆ ತೆರೆಯಲು ಯೋಜನೆ ರೂಪಿಸಿದ್ದಾರೆ. ಶಿಕ್ಷಣದಿಂದ ಬದಲಾವಣೆ ಸಾಧ್ಯ ಎಂದರಲ್ಲಿ ನಂಬಿಕೆ ಇಟ್ಟುಕೊಂಡಿರುವ ಮಧುಬಂಗಾರಪ್ಪ ಅವರು ಶಿಕ್ಷಣ ಇಲಾಖೆಯ ಸುಧಾರಣೆಗೆ ನಿರಂತರವಾಗಿ ಶ್ರಮಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.
ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಹಾಗೂ ಸಿಹಿ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಲಿಂಗೇಗೌಡ, ಮುಖಂಡರಾದ ಅನೀಶ್‌ಗೌಡ ಪಾಟೀಲ್, ಎಲ್.ಜಿ. ಮಾಲತೇಶ್ ಲಕ್ಕವಳ್ಳಿ, ಹಬೀಬ್ ಉಲ್ಲಾ ಹವಾಲ್ದಾರ್, ದೇವರಾಜ್ ತ್ಯಾವರೆತೆಪ್ಪ, ಚಾಂದ್ ನೂರಿ, ಬಸವರಾಜ್ ಅಗಸನಹಳ್ಳಿ, ಚಂದ್ರಪ್ಪ ಮಾಸ್ತರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.