ADVERTISEMENT

ಮಧುಬಂಗಾರಪ್ಪ ಜಿಲ್ಲಾ ಪ್ರವಾಸ ನಾಳೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:29 IST
Last Updated 27 ಏಪ್ರಿಲ್ 2025, 16:29 IST

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ 28, 29ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. 

ಏ. 28ರಂದು ಬೆಳಿಗ್ಗೆ 11.30ಕ್ಕೆ ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕು ಕಾಗಾಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸ್ವರ್ಣ ಸಂಭ್ರಮದಲ್ಲಿ ಪಾಲ್ಗೊಳ್ಳುವರು.

ಏ. 29ರಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.