ADVERTISEMENT

ಮಲ್ನಾಡ್‌ ಆಸ್ಪತ್ರೆ; ಸೊರಬದಲ್ಲಿ ಕ್ಯಾನ್ಸರ್ ಉಚಿತ ತಪಾಸಣೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 4:36 IST
Last Updated 26 ಫೆಬ್ರುವರಿ 2026, 4:36 IST
ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ನೇತೃತ್ವದಲ್ಲಿ ಬುಧವಾರ ಸೊರಬದಲ್ಲಿ ನಡೆದ ಕ್ಯಾನ್ಸರ್ ಜಾಗೃತಿ ಹಾಗೂ ಉಚಿತ ತಪಾಸಣಾ ಶಿಬಿರದ ಉದ್ಘಾಟನೆಯ ನೋಟ
ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ನೇತೃತ್ವದಲ್ಲಿ ಬುಧವಾರ ಸೊರಬದಲ್ಲಿ ನಡೆದ ಕ್ಯಾನ್ಸರ್ ಜಾಗೃತಿ ಹಾಗೂ ಉಚಿತ ತಪಾಸಣಾ ಶಿಬಿರದ ಉದ್ಘಾಟನೆಯ ನೋಟ   

ಶಿವಮೊಗ್ಗ: ಇಲ್ಲಿನ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ, ಪ್ರಗತಿ ಬಂಧು ಸ್ವ– ಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಬುಧವಾರ ಸೊರಬದಲ್ಲಿ ಕ್ಯಾನ್ಸರ್ ಜಾಗೃತಿ ಹಾಗೂ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಅಮಿತ್ ರಾಜ್ ಹಾಗೂ ವೈದ್ಯಕೀಯ ಸಿಬ್ಬಂದಿ 100ಕ್ಕೂ ಹೆಚ್ಚು ಜನರ ತಪಾಸಣೆ ಮಾಡಿದರು. ವಿಶೇಷವಾಗಿ ಮಹಿಳೆಯರಿಗೆ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಸಂಬಂಧಿತ ತಪಾಸಣೆ ಮತ್ತು ಪುರುಷರಿಗೆ ಬಾಯಿ ಹಾಗೂ ಶ್ವಾಸಕೋಶದ ಕ್ಯಾನ್ಸರ್ ತಪಾಸಣೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು. 

ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಮತ್ತು ರೆಡ್ಡೀಸ್‌ ಫಾರ್ಮಾ ವತಿಯಿಂದ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.