
ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ನ. 9ರಂದು ಸಂಜೆ 7ಕ್ಕೆ ನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ‘ಮಲೆನಾಡು ಲೋಹಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು ತಿಳಿಸಿದ್ದಾರೆ.
ದೀರ್ಘಕಾಲದ ರಾಜಕಾರಣದಲ್ಲಿ ಕಾಗೋಡು ತಿಮ್ಮಪ್ಪ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ನಮ್ಮ ಸಂಘಟನೆಯಿಂದ ಈ ಗೌರವ ನೀಡಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನ. 7ರಿಂದ 9ರವರೆಗೆ ವಿವಿಧ ಸಂಘ ಸಂಸ್ಥೆಗಳ, ಅಧಿಕಾರಿಗಳ ತಂಡದ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದೆ. ದೀಪಾವಳಿ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ 9ರ ಸಂಜೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ನಂತರ ಭೀಮನಕೋಣೆ ಗ್ರಾಮದ ಸ್ವರಾಂಜಲಿ ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮವಿದೆ ಎಂದು ತಿಳಿಸಿದರು.
ಗಾಂಧಿನಗರ ಯುವಜನ ಸಂಘದ ರಾಮಣ್ಣ, ಡಾ.ಶ್ರೀಪಾದ್, ರಾಘು, ರಾಮು, ರವಿ, ಪ್ರವೀಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.