ADVERTISEMENT

ಗಾಂಜಾ ಮಾರಾಟ: ಆರೋಪಿ ಬಂಧನ

-

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 13:30 IST
Last Updated 18 ಆಗಸ್ಟ್ 2023, 13:30 IST
ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)   

ಶಿವಮೊಗ್ಗ: ಇಲ್ಲಿನ ಸೂಳೆಬೈಲು ಪುಟ್ಟಪ್ಪ ಕ್ಯಾಂಪ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಹೊಳಲೂರಿನ ಸದ್ದಾಂ ಹುಸೇನ್ (30) ಬಂಧಿತ ಆರೋಪಿ. ಆತನಿಂದ  ₹20,000 ಮೌಲ್ಯದ 338 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

ಡಿ.ಸಿ.ಆರ್.ಬಿ ವಿಭಾಗದ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಡಿ.ಟಿ.ಪ್ರಭು ಹಾಗೂ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಅಪರಾಧ (ಸಿಇಎನ್) ಪೊಲೀಸ್ ಠಾಣೆಯ ಪಿಐ ದೀಪಕ್‌ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.