ADVERTISEMENT

ಅಶ್ಲೀಲ ಫೋಟೊ ಅಪ್‌ಲೋಡ್ ಮಾಡುತ್ತಿದ್ದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 13:45 IST
Last Updated 5 ಡಿಸೆಂಬರ್ 2019, 13:45 IST

ಶಿವಮೊಗ್ಗ: ನಕಲಿಫೇಸ್‌ಬುಕ್‌ ಅಕೌಂಟ್ ತೆರೆದು ಮಹಿಳೆಯೊಬ್ಬರ ಅಶ್ಲೀಲ ಫೋಟೊಗಳನ್ನ ಅಪ್‌ಲೋಡ್ ಮಾಡುತ್ತಿದ್ದ ಆರೋಪಿಯನ್ನು ಗುರುವಾರ ಶಿವಮೊಗ್ಗದ ಸೈಬರ್ ಕ್ರೈಂ ಮತ್ತು ಆರ್ಥಿಕ, ಮಾದಕ ವಸ್ತು ಅಪರಾಧ ತಡೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹರಮಘಟ್ಟದ ನಿವಾಸಿ ಉಮೇಶ (19) ಬಂಧಿತ ಆರೋಪಿ. ನಕಲಿ ಫೇಸ್ ಬುಕ್ ಖಾತೆ ತೆರೆದು ಅದರಲ್ಲಿ ಮಹಿಳೆಯ ಫೋಟೊಗಳೊಂದಿಗೆ ಅಶ್ಲೀಲ ಫೋಟೊಗಳನ್ನು ಎಡಿಟ್ ಮಾಡಿ, ಅಪ್‌ಲೋಡ್ ಮಾಡಿ ಕಿರುಕುಳ ನೀಡುತ್ತಿದ್ದ ಬಗ್ಗೆ ನೊಂದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಪಿಐ ಕೆ.ಟಿ. ಗುರುರಾಜ್ ಅವರ ನೇತೃತ್ವದಲ್ಲಿ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.