ADVERTISEMENT

ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 4:11 IST
Last Updated 8 ಡಿಸೆಂಬರ್ 2019, 4:11 IST
ಸಾಗರ ನಗರದ ಸೊರಬ ರಸ್ತೆ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾಗರ ನಗರದ ಸೊರಬ ರಸ್ತೆ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.   

ಸಾಗರ: ನಗರದ ಸೊರಬ ರಸ್ತೆಯ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿಯ ಶ್ರೀಧರ ನಗರ ಬಡಾವಣೆಯ ಅಬ್ದುಲ್ ಅಜೀಮ್ ಎಂಬಾತ ಬಂಧಿತ ಆರೋಪಿ. ಈತನಿಂದ 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಎಎಸ್‌ಪಿ ಯತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಸಾಗರ್ ಕರ್, ಶ್ರೀಧರ, ಕಾಳಾನಾಯ್ಕ, ಸಂತೋಷ್ ನಾಯ್ಕ, ವಿಶ್ವನಾಥ್, ಮಲ್ಲೇಶ್, ಗುರುಬಸವರಾಜ್, ಮಲ್ಲನಗೌಡ ಕಾರ್ಯಾಚರಣೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.