ADVERTISEMENT

ಮಂಗಳೂರಿನ ಕುಕ್ಕರ್ ಸ್ಫೋಟ ಪ್ರಕರಣ: ಶಿವಮೊಗ್ಗಕ್ಕೆ ಶಾರಿಕ್ ಕರೆತಂದು ಸ್ಥಳ ಮಹಜರು

ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 4:55 IST
Last Updated 9 ಮಾರ್ಚ್ 2023, 4:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ಮಂಗಳೂರಿನ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ನನ್ನು ಎನ್ಐಎ ತಂಡ ಮಂಗಳವಾರ ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದೆ. ಆತನ ಜೊತೆ ಶಿವಮೊಗ್ಗದ ಪ್ರೇಮಚಂದ್ ಹಾಗೂ ಚಾಕು ಇರಿತ ಪ್ರಕರಣದಲ್ಲಿ ಬಂಧಿತ ಆರೋಪಿ ಜಬೀವುಲ್ಲಾನನ್ನೂ ಕರೆ ತಂದು ಸ್ಥಳ ಮಹಜರು ಮಾಡಿದೆ.

ಇವರಿಬ್ಬರು ಶಿವಮೊಗ್ಗ ತುಂಗಾ ನದಿ ತೀರದಲ್ಲಿ ‘ಟ್ರಯಲ್ ಬ್ಲಾಸ್ಟ್’ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಅವರನ್ನು ಸರ್ಕಾರಿ ಬಸ್ ನಿಲ್ದಾಣ ಮತ್ತು ಅದರ ಬಳಿ ಇರುವ ಬ್ರೈಟ್ ಹೊಟೇಲ್ ಬಳಿ ಕರೆದೊಯ್ದು ಮಹಜರು ಮಾಡಿದ್ದಾರೆ. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದ ಶಾರಿಕ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಇದೀಗ ಗುಣಮುಖನಾಗಿರುವ ಶಾರಿಕ್‌ನನ್ನು ಎನ್‌ಐಎ ತಂಡವು ಮಾ.6ರಂದು ಬೆಂಗಳೂರಿನ ವಿಶೇಷ ಎನ್‌ಐಎ ಕೋರ್ಟ್ ಮುಂದೆ ಹಾಜರುಪಡಿಸಿ, 10 ದಿನಗಳ ಅವಧಿಗೆ ತನ್ನ ವಶಕ್ಕೆ ಪಡೆದಿದೆ. ಅದರ ಬೆನ್ನಲ್ಲೇ ಪ್ರಕರಣದ ತನಿಖೆ ಚುರುಕುಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT