
ಶಿವಮೊಗ್ಗ: ಇಲ್ಲಿನ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಶಿವಮೊಗ್ಗದ ನಮ್ಮೂರ ಬಳಗದಿಂದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ರಾಷ್ಟ್ರಮಟ್ಟದ ಭಾರೀ ಟಗರು ಕಾಳಗಕ್ಕೆ ಚಾಲನೆ ನೀಡಲಾಯಿತು.
ಬಿಸಿಲನ್ನೂ ಲೆಕ್ಕಿಸದೇ ಟಗರು ಕಾಳಗದ ಅಭಿಮಾನಿಗಳು ದಿನವಡೀ ಕಾಳಗ ವೀಕ್ಷಣೆ ಮಾಡಿದರು. ಟಗರುಗಳ ಬೆಂಬಲಕ್ಕೆ ನಿಂತು ಚಪ್ಪಾಳೆ, ಶಿಳ್ಳೆಯ ಮೂಲಕ ಹುರಿದುಂಬಿಸಿದರು.
ಶ್ರೀವಿನಾಯಕನಿಗೆ ಪೂಜೆ ಸಮರ್ಪಿಸುವ ಮೂಲಕ ಶಾಸಕ ಎಸ್.ಎನ್.ಚನ್ನಬಸಪ್ಪ ಟಗರು ಕಾಳಗಕ್ಕೆ ಚಾಲನೆ ನೀಡಿದರು. ಈ ವೇಳೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸುಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್, ಮಾರಿಕಾಂಬಾ ದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ಮರಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಶ್ರೀಕಾಂತ್, ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ.ರಂಗನಾಥ್, ಗೌರವ ಸಂಚಾಲಕರಾದ ಐಡಿಯಲ್ ಗೋಪಿ, ಎಚ್ ಪಾಲಾಕ್ಷಿ, ಸಿ. ರವಿ, ಜಿ.ಡಿ. ಮಂಜುನಾಥ್, ಸೂಡಾ ಸದಸ್ಯ ಎಂ.ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.