
ಪ್ರಜಾವಾಣಿ ವಾರ್ತೆ
ರಿಪ್ಪನ್‌ಪೇಟೆ: ಕೆಂಚನಾಲ ಮಾರಿಕಾಂಬಾ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ಜರುಗಿತು.
ಬ್ರಾಹ್ಮಿ ಮೂಹೂರ್ತದಲ್ಲಿ ದೇವಿಗೆ ವಿಶೇಷ ಹೂವಿನ ಅಲಂಕಾರ, ಪೂಜಾ ಕೈಂಕರ್ಯ ನಡೆದವು. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಬೆಳಿಗ್ಗೆಯಿಂದಲೇ ದೇವಸ್ಥಾನದ ಬಳಿ ಸರತಿ ಸಾಲಿನಲ್ಲಿ ನಿಂತು ದೇವಿಗೆ ಹರಕೆ ಕಾಣಿಕೆ ಸಮರ್ಪಿಸಿದರು. 20 ಸಾವಿರಕ್ಕೂ ಅಧಿಕ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ವರ್ಷದಲ್ಲಿ ಎರಡು ಬಾರಿ ಜಾತ್ರೆ ನಡೆಯುವುದು ಇಲ್ಲಿನ ವಿಶೇಷ. ಮಳೆಗಾಲದಲ್ಲಿ ಮಂಗಳವಾರ ಹಾಗೂ ಬೇಸಿಗೆಯಲ್ಲಿ ಬುಧವಾರ ಆಚರಿಸುವುದು ವಾಡಿಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.