ADVERTISEMENT

ಮಾಝ್‌, ಯಾಸೀನ್ 14 ದಿನ ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 4:45 IST
Last Updated 1 ಅಕ್ಟೋಬರ್ 2022, 4:45 IST

ಶಿವಮೊಗ್ಗ: ನಿಷೇಧಿತ ಭಯೋತ್ಪಾದಕ ಸಂಘಟನೆ ಐಎಸ್‌ ಜೊತೆ ನಂಟು ಹೊಂದಿದ ಆರೋಪದ ಮೇಲೆ ಬಂಧಿಸಲಾಗಿರುವ ಮಾಝ್ ಮುನೀರ್ ಅಹಮದ್ ಹಾಗೂ ಮೊಹಮ್ಮದ್ ಯಾಸೀನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ಗ್ರಾಮೀಣ ಠಾಣೆ ‍ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಅಕ್ಟೋಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅದಕ್ಕೂ ಮುನ್ನ ನಿಯಮಾವಳಿಯಂತೆ ಆರೋಪಿಗಳ ವೈದ್ಯಕೀಯ ಪರೀಕ್ಷೆ ಮಾಡಿಸಿದರು.

ಪರೀಕ್ಷೆಯಲ್ಲಿ ತೇರ್ಗಡೆ: ಮೊಹಮ್ಮದ್ ಯಾಸೀನ್‌ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ ಪರೀಕ್ಷೆಯ ಫಲಿತಾಂಶ ಬಂದಿದ್ದು, ತೇರ್ಗಡೆ ಆಗಿದ್ದಾನೆ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಯಾಸೀನ್ ಅನುತ್ತೀರ್ಣನಾಗಿದ್ದ. ಮತ್ತೆ ಪರೀಕ್ಷೆ ಬರೆದಿದ್ದ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.