ADVERTISEMENT

ಶಿವಮೊಗ್ಗ: ಔಷಧ ಅಂಗಡಿಗಳು ಬಂದ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2018, 12:12 IST
Last Updated 28 ಸೆಪ್ಟೆಂಬರ್ 2018, 12:12 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಔಷಧ ವ್ಯಾಪಾರಿಗಳು ಆನ್‌ಲೈನ್ ವಹಿವಾಟು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಔಷಧ ವ್ಯಾಪಾರಿಗಳು ಆನ್‌ಲೈನ್ ವಹಿವಾಟು ವಿರೋಧಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಆನ್‌ಲೈನ್ ಮೂಲಕ ಔಷಧ ವಹಿವಾಟು ವಿರೋಧಿಸಿ ಜಿಲ್ಲೆಯಲ್ಲೂ ಶುಕ್ರವಾರ ಔಷಧ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಮಾಲೀಕರು ಮತ್ತು ನೌಕರರುಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಆನ್‌ಲೈನ್ ಮೂಲಕ ಔಷಧ ವ್ಯಾಪಾರಕ್ಕೆ ಉತ್ತೇಜನ ನೀಡಿದರೆ ಸಾಂಪ್ರದಾಯಿಕವಾಗಿ ಅದೇ ವೃತ್ತಿ ಮಾಡಿಕೊಂಡು ಬಂದವರಿಗೆ ಅನ್ಯಾಯವಾಗುತ್ತದೆ. ಸಾಕಷ್ಟು ಬಂಡವಾಳ ಹಾಕಿ ಅಂಗಡಿ ತೆರೆದು ಔಷಧ ವ್ಯಾಪಾರ ನಡೆಸುತ್ತಿರುವ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆನ್‌ಲೈನ್ ಔಷಧ ಖರೀದಿಸಿದರೆ ರೋಗಿಗಳಿಗೆ ಸಮರ್ಪಕ ಮಾಹಿತಿ ದೊರೆಯುವುದಿಲ್ಲ. ವಿರೋಧದ ಮಧ್ಯೆಯೂ ಕೇಂದ್ರ ಸರ್ಕಾರ ಆನ್‌ಲೈನ್ ಮೂಲಕ ಔಷಧ ವ್ಯವಹಾರ ಕಾನೂನುಬದ್ದಗೊಳಿಸಲು ಮುಂದಾಗಿದೆ. ಇದು ಸರಿಯಲ್ಲ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.