ADVERTISEMENT

ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 21:32 IST
Last Updated 23 ಡಿಸೆಂಬರ್ 2020, 21:32 IST
ಲಲಿತಾ
ಲಲಿತಾ   

ಶಿವಮೊಗ್ಗ: ಅಂತಿಮ ವರ್ಷದ ಎಂಬಿಬಿಎಸ್‌ ಓದುತ್ತಿದ್ದ ಇಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಲಲಿತಾ (23) ಸೀಮ್ಸ್ ಆವರಣದಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ‘ಖಿನ್ನತೆಗೆ ಒಳಗಾಗಿದ್ದ ಲಲಿತಾ ಕಳೆದ ವರ್ಷವೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು’ ಎಂದು ಸಿಮ್ಸ್ ಆಡಳಿತಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT