ADVERTISEMENT

ಮೆಗ್ಗಾನ್ ಆಸ್ಪತ್ರೆ ಭ್ರಷ್ಟಾಚಾರ; ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 6:51 IST
Last Updated 3 ಡಿಸೆಂಬರ್ 2025, 6:51 IST
ಮೆಗ್ಗಾನ್ ಆಸ್ಪತ್ರೆಯ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಮೆಗ್ಗಾನ್ ಆಸ್ಪತ್ರೆಯ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು   

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮೆಗ್ಗಾನ್ ಆಸ್ಪತ್ರೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಆದರೆ, ಸಮರ್ಪಕ ಸಂಪನ್ಮೂಲದ ಬಳಕೆಯ ಕೊರತೆಯಿಂದ ಪ್ರತಿನಿತ್ಯ ಆಸ್ಪತ್ರೆ ಮತ್ತು ಅಲ್ಲಿನ ವೈದ್ಯರು ಒಂದಲ್ಲಾ ಒಂದು ರೀತಿ ಸುದ್ದಿಯಾಗುತ್ತಿದ್ದಾರೆ. ನ. 28ರಂದು ನೂರ್ ಅಫ್‌ಶಾ ಎಂಬ ಗರ್ಭಿಣಿ ವೈದ್ಯರ ನಿರ್ಲಕ್ಷ್ಯದಿಂದ ಸಾವಿಗೀಡಾಗಿದ್ದರು. ಮೃತರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಜಿಲ್ಲಾಡಳಿತ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ಮೇ 26 ರಂದು ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಅನೇಕ ಸೂಚನೆಗಳನ್ನು ನೀಡಿದ್ದರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಹೆಣ್ಣು ಮಗು ಜನಿಸಿದರೆ ₹ 1000, ಗಂಡು ಮಗು ಜನಿಸಿದರೆ ₹ 2000 ಲಂಚ ಕೊಟ್ಟರೆ ಮಾತ್ರ ಮಗುವನ್ನು ಕುಟುಂಬಕ್ಕೆ ನೀಡುವ ಪದ್ಧತಿಯನ್ನು ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿ ರೂಢಿಸಿಕೊಂಡಿದ್ದಾರೆಂದು ದೂರುಗಳು ಬಂದಿದ್ದು, ಈ ಬಗ್ಗೆ ಇತ್ತೀಚೆಗೆ ಭೇಟಿ ನೀಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು ಎಂದು ತಿಳಿಸಿದರು.

ADVERTISEMENT

ಮೊಗ್ಗಾನ್‌ನ ಮೆಡಿಕಲ್ ವಿಭಾಗದಲ್ಲಿ ವೈದ್ಯರು ಬರೆದ ಔಷಧಿಯಲ್ಲಿ ಅರ್ಧಮಾತ್ರ ಕೊಟ್ಟು ಇನ್ನುಳಿದ ಔಷಧಿಯನ್ನು ಹೊರಗಡೆ ಖರೀದಿಸಲು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರೆ. ಪ್ರತಿಯೊಂದಕ್ಕೂ ಪ್ರತಿದಿನ ರೋಗಿಗಳು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ನೋಂದಣಿ ವಿಭಾಗ ಮತ್ತು ಔಷಧಿ ವಿಭಾಗವನ್ನು ವಿಸ್ತರಿಸಿ ಇನ್ನು ಹೆಚ್ಚಿನ ಸಿಬ್ಬಂದಿ ನೇಮಿಸುವ ಅವಶ್ಯಕತೆಯಿದೆ ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ ಜಿಲಾನ್‌ಖಾನ್, ಕಾರ್ಯದರ್ಶಿ ಇಮ್ರಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.